Love Proposal - Kerala orders against atrocity | ಪ್ರೇಮ ಪ್ರಸ್ತಾಪ ತಿರಸ್ಕಾರ: ಹಲ್ಲೆ, ಕಿರುಕುಳ ನೀಡಿದರೆ ಕಠಿಣ ಕ್ರಮ- ಕೇರಳ ಸರ್ಕಾರ ಎಚ್ಚರಿಕೆ
ಪ್ರೇಮ ಪ್ರಸ್ತಾಪ ತಿರಸ್ಕಾರ: ಹಲ್ಲೆ, ಕಿರುಕುಳ ನೀಡಿದರೆ ಕಠಿಣ ಕ್ರಮ- ಕೇರಳ ಸರ್ಕಾರ ಎಚ್ಚರಿಕೆ
ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ ಕಾರಣಕ್ಕೆ ಮಹಿಳೆ/ಯುವತಿಯರಿಗೆ ಕಿರುಕುಳ ನೀಡುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇರಳ ಸರ್ಕಾರ ಮುಂದಾಗಿದೆ.
ಈ ಬಗ್ಗೆ ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್, ಪ್ರೇಮ ಪ್ರಸ್ತಾಪ ತಿರಸ್ಕರಿಸಿದ ಕಾರಣಕ್ಕೆ ಹೆಣ್ಣು ಜೀವಕ್ಕೆ ಕಿರುಕುಳ, ಹಲ್ಲೆ, ದೌರ್ಜನ್ಯ ನೀಡುವ ವ್ಯಕ್ತಿಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ರಾಜ್ಯ ವಿಧಾನಸಭೆಯಲ್ಲಿ ಈ ಬಗ್ಗೆ ಕೇರಳ ಸಿಎಂ ಆದೇಶಕ್ಕೆ ಸಹಿ ಹಾಕಿದ್ದಾರೆ.
ಎರ್ನಾಕುಳಂನಲ್ಲಿ ದಂತ ವೈದ್ಯ ವಿದ್ಯಾರ್ಥಿನಿಯನ್ನು ಪ್ರೇಮ ಪ್ರಸ್ತಾಪ ತಿರಸ್ಕರಿಸಿದರು ಎಂಬ ಕಾರಣಕ್ಕೆ ಆಕೆಯನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದು ರಾಜ್ಯದಲ್ಲೇ ತಲ್ಲಣ ಮೂಡಿಸಿತ್ತು. ಇದರ ಜೊತೆಗೆ ವರದಕ್ಷಿಣೆ ಕಿರುಕುಳ, ಅತ್ಯಾಚಾರ ನಡೆಸಿ ಕೊಲೆ ಮಾಡಿದ ಹಲವು ಪ್ರಕರಣಗಳು ಕೇರಳದಲ್ಲಿ ವರದಿಯಾದ ಬೆನ್ನಲ್ಲೇ ಕೇರಳ ಸರ್ಕಾರ ಈ ದಿಟ್ಟ ಹಾಗೂ ಮಹತ್ವದ ಆದೇಶ ಹೊರಡಿಸಿದೆ.