Direction to postpone GB - ಚುನಾವಣಾ ನೀತಿ ಸಂಹಿತೆ: ಸಹಕಾರ ಸಂಘಗಳ ವಾರ್ಷಿಕ ಸಾಮಾನ್ಯ ಸಭೆ ಮುಂದೂಡಲು ಸಹಕಾರ ಇಲಾಖೆ ಆದೇಶ
ಚುನಾವಣಾ ನೀತಿ ಸಂಹಿತೆ: ಸಹಕಾರ ಸಂಘಗಳ ವಾರ್ಷಿಕ ಸಾಮಾನ್ಯ ಸಭೆ ಮುಂದೂಡಲು ಸಹಕಾರ ಇಲಾಖೆ ಆದೇಶ
ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ವಾರ್ಷಿಕ ಸಾಮಾನ್ಯ ಸಭೆಯನ್ನು ಡಿ.16 ರ ಬಳಿಕ ಮುಂದೂಡುವಂತೆ ಸಹಕಾರ ಇಲಾಖೆ ಆದೇಶ ಮಾಡಿದೆ.
ನವೆಂಬರ್ 20ರಂದು ಈ ಬಗ್ಗೆ ಆದೇಶ ಹೊರಡಿಸಿದ ಸಹಕಾರ ಇಲಾಖೆಯ ಅಧಿಕಾರಿಗಳು, ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಸಹಕಾರ ಸಂಘಗಳ ವಾರ್ಷಿಕ ಸಾಮಾನ್ಯ ಸಭೆಯು ನೇರವಾಗಿ ಯಾ ಪರೋಕ್ಷವಾಗಿ ಚುನಾವಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಎಲ್ಲ ಸಹಕಾರ ಸಂಘಗಳ ಮತ್ತು ಸೌಹಾರ್ದ ಸಹಕಾರಿಗಳ ವಾರ್ಷಿಕ ಸಾಮಾನ್ಯ ಸಭೆಯನ್ನು ಮುಂದೂಡುವಂತೆ ನಿರ್ದೇಶನ ನೀಡಲಾಗಿದೆ.
ಸಹಕಾರ ಸಂಘಗಳ ವಾರ್ಷಿಕ ಸಾಮಾನ್ಯ ಸಭೆಯನ್ನು ಡಿ.16 ರ ಬಳಿಕ ನಿಗದಿಪಡಿಸುವಂತೆ ಸಹಕಾರ ಇಲಾಖೆ ಅಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಈ ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.