-->
Karnataka HC granted Bail to Rajeshwari ಉದ್ಯಮಿ ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣ: ಅಪರಾಧಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್‌ನಿಂದ ಜಾಮೀನು

Karnataka HC granted Bail to Rajeshwari ಉದ್ಯಮಿ ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣ: ಅಪರಾಧಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್‌ನಿಂದ ಜಾಮೀನು

ಉದ್ಯಮಿ ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣ: ಅಪರಾಧಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್‌ನಿಂದ ಜಾಮೀನು





ರಾಜ್ಯನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ಅನಿವಾಸಿ ಉದ್ಯಮಿ‌ ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣದ ಅಪರಾಧಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.



ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉದ್ಯಮಿ ಭಾಸ್ಕರ್‌ ಪತ್ನಿ ರಾಜೇಶ್ವರಿ, ಪುತ್ರ ನವನೀತ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ ಭಟ್‌ ಅವರನ್ನು ಅಪರಾಧಿ ಎಂದು ಘೋಷಿಸಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಜೀವಾವಧಿ ಶಿಕ್ಷೆ ವಿಧಿಸಿತ್ತು.



ಈ ಜೀವಾವಧಿ ಶಿಕ್ಷೆಯನ್ನು ರದ್ದುಮಾಡಬೇಕು ಮತ್ತು ಅಧೀನ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ಅಮಾನತಿನಲ್ಲಿ ಇಟ್ಟು ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ರಾಜೇಶ್ವರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾ. ಜಿ ನರೇಂದರ್ ಮತ್ತು ನ್ಯಾ. ಇ. ಎಸ್. ಇಂದಿರೇಶ್ ಅವರಿದ್ದ ನ್ಯಾಯ ಪೀಠ ಜಾಮೀನು ಆದೇಶ ಹೊರಡಿಸಿದೆ.



ರಾಜೇಶ್ವರಿ ಪರ ವಾದ ಮಾಡಿದ ವಕೀಲ ಹಸ್ಮತ್ ಪಾಷಾ 'ಭಾಸ್ಕರ್ ಶೆಟ್ಟಿ ಅವರನ್ನು ಹೋಮಕುಂಡದಲ್ಲಿ ಸುಟ್ಟು ಕೊಲೆ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ. ಆದರೆ, ಹೋಮ ಕುಂಡದಲ್ಲಿ ಮೃತದೇಹ ದೊರೆತಿಲ್ಲ. ಪ್ರಕರಣದಲ್ಲಿ DNA ಪರೀಕ್ಷೆಯ ವಿಶ್ಲೇಷಣೆ ಸೂಕ್ತವಾಗಿಲ್ಲ. ಪತ್ನಿ ರಾಜೇಶ್ವರಿ ಶೆಟ್ಟಿ ಅವರೇ ಕೊಲೆ ಮಾಡಿರುವುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇಲ್ಲ. ಅದನ್ನು ಪರಿಗಣಿಸದೇ ವಿಚಾರಣಾ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಹೀಗಾಗಿ, ಶಿಕ್ಷೆಯನ್ನು ಅಮಾನತ್ತಿನಲ್ಲಿರಿಸಿ, ಜಾಮೀನು ಮಂಜೂರು ಮಾಡಬೇಕು' ಎಂದು ವಾದಿಸಿದರು.



28-07-2016ರಂದು ಉದ್ಯಮಿ ಭಾಸ್ಕರ್‌ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಅವರ ಶವವನ್ನು ಹೋಮಕುಂಡದಲ್ಲಿ ದಹಿಸಲಾಗಿತ್ತು. ಅವಶೇಷಗಳನ್ನು ಹತ್ತಿರದ ನದಿಗೆ ಎಸೆಯಲಾಗಿತ್ತು. 31-07-2016ರಂದು ಭಾಸ್ಕರ್‌ ಅವರ ತಾಯಿ ತಮ್ಮ ಮಗ ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಆಗಸ್ಟ್‌ನಲ್ಲಿ ಆರೋಪಿಗಳನ್ನು ಬಂಧಿಸಿದ್ದರು.



ಪ್ರಕರಣದಲ್ಲಿ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ ಭಟ್‌ಗೆ IPC ಸೆಕ್ಷನ್ 302 (ಕೊಲೆಗೆ ದಂಡನೆ), 201(ಸಾಕ್ಷ್ಯ ನಾಶ ಅಥವಾ ಅಪರಾಧಿಯ ರಕ್ಷಣೆಗೆ ಸುಳ್ಳು ಹೇಳುವುದು), ಮತ್ತು 120 ಬಿ (ಅಪರಾಧಿಕ ಒಳಸಂಚಿಗೆ ದಂಡನೆ), ಸೆಕ್ಷನ್ 34ರ (ಸಮಾನ ಉದ್ದೇಶ ಈಡೇರಿಕೆಗಾಗಿ ವಿವಿಧ ವ್ಯಕಿಗಳು ಎಸಗುವ ಕೃತ್ಯ) ಅಡಿ ಶಿಕ್ಷೆ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜೆ ಎನ್‌ ಸುಬ್ರಹ್ಮಣ್ಯ ತೀರ್ಪು ಪ್ರಕಟಿಸಿದ್ದರು.

Ads on article

Advertise in articles 1

advertising articles 2

Advertise under the article