Revised market rate in Mangaluru- ಮಂಗಳೂರು ತಾಲೂಕು: ಸ್ಥಿರಾಸ್ತಿಗಳ ಮಾರುಕಟ್ಟೆ ಮಾರ್ಗಸೂಚಿ ಪರಿಷ್ಕೃತ ದರಪಟ್ಟಿ
Thursday, December 30, 2021
ಮಂಗಳೂರು ತಾಲೂಕು: ಸ್ಥಿರಾಸ್ತಿಗಳ ಮಾರುಕಟ್ಟೆ ಮಾರ್ಗಸೂಚಿ ಪರಿಷ್ಕೃತ ದರಪಟ್ಟಿ
ಮಂಗಳೂರು ತಾಲೂಕು ಉಪನೋಂದಣಾಧಿಕಾರಿಗಳ ಕಚೇರಿ ವ್ಯಾಪ್ತಿಗೆ ಬರುವ 2022-23ನೇ ಸಾಲಿನ ಸ್ಥಿರಾಸ್ತಿಗಳ ಮಾರುಕಟ್ಟೆ ಮಾರ್ಗಸೂಚಿ ದರಪಟ್ಟಿಯನ್ನು ಪರಿಷ್ಕರಿಸಲಾಗಿದೆ.
ಮಂಗಳೂರು ತಾಲೂಕು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಕರೆದಿದ್ದ ಸಿವಿಸಿ ಉಪಸಮಿತಿ ಸಭೆಯಲ್ಲಿ ದರ ಪಟ್ಟಿಯನ್ನು ಮಂಡಿಸಿ ಅನುಮೋದನೆ ನೀಡಲಾಗಿದೆ.
ಪರಿಷ್ಕೃತ ದರಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಮಂಗಳೂರಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ.
ಈ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ 15 ದಿನದೊಳಗೆ ಮಂಗಳೂರಿನ ಉಪನೋಂದಣಾಧಿಕಾರಿಗಳು ಅಥವಾ ತಹಶೀಲ್ದಾರರ ಕಚೇರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ತಾಲೂಕಿನ ಉಪ ನೋಂದಣಾಧಿಕಾರಿಗಳು ತಿಳಿಸಿದ್ದಾರೆ.