-->
Bribe of Rs. 50/-: 50 ರೂ. ಲಂಚ ಪಡೆದ ನೌಕರಿನಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ: ತೀರ್ಪು ಪರಿಷ್ಕರಿಸಿದ ಹೈಕೋರ್ಟ್

Bribe of Rs. 50/-: 50 ರೂ. ಲಂಚ ಪಡೆದ ನೌಕರಿನಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ: ತೀರ್ಪು ಪರಿಷ್ಕರಿಸಿದ ಹೈಕೋರ್ಟ್

50 ರೂ. ಲಂಚ ಪಡೆದ ನೌಕರಿನಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ: ತೀರ್ಪು ಪರಿಷ್ಕರಿಸಿದ ಹೈಕೋರ್ಟ್






50 ರೂಪಾಯಿ ಲಂಚ ಸ್ವೀಕರಿಸಿದ ಸರ್ಕಾರಿ ಉದ್ಯೋಗಿಯೊಬ್ಬರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ ನೀಡಿರುವುದು ಸಮಂಜಸವಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.


ಸುಮಾರು 18 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ನೌಕರರೊಬ್ಬರು 50 ರೂಪಾಯಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರ ಬಂಧನಕ್ಕೊಳಗಾಗಿದ್ದರು.


ಹೈಕೋರ್ಟ್‌ಗೆ ಈ ಕುರಿತಂತೆ ಸಲ್ಲಿಸಲಾದ ರಿಟ್ ಅರ್ಜಿ (WP 110912/2017) ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಸರ್ಕಾರಿ ನೌಕರಿಗೆ ನೀಡಲಾದ ಕಡ್ಡಾಯ ನಿವೃತ್ತಿಯ ಶಿಕ್ಷೆಯನ್ನು ರದ್ದುಪಡಿಸಿದೆ. ಹಾಗೂ, ಪ್ರಕರಣವನ್ನು ಮತ್ತೆ ಹೊಸದಾಗಿ ಪರಿಗಣಿಸಿ 2 ತಿಂಗಳಲ್ಲಿ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಆಡಳಿತಾತ್ಮಕ ಪ್ರಾಧಿಕಾರಕ್ಕೆ ಆದೇಶಿಸಿದೆ.


ಘಟನೆ ವಿವರ

ಸಹಾಯಕ ಕಾರ್ಯಕಾರಿ ಎಂಜಿನಿಯರ್ ಚಂದ್ರಾಚಾರಿ ಎಂಬುವರನ್ನು 1998ರಲ್ಲಿ ಬ್ಯಾಡಗಿಯಿಂದ ಧಾರವಾಡಕ್ಕೆ ವರ್ಗಾವಣೆ ಮಾಡಲಾಗಿತ್ತು. ಈ ವರ್ಗಾವಣೆ ಕಡತವನ್ನು ವಿಲೇವಾರಿಗೆ ಅಧಿಕಾರಿಗಳು ರೂ. 150 ಲಂಚ ಕೇಳಿದ್ದರೆಂದು ದೂರು ನೀಡಲಾಗಿತ್ತು. ಆ ಪ್ರಕಾರ, ಟ್ಯಾಪ್ ವೇಳೆ, 50 ರೂಪಾಯಿ ಲಂಚ ಪಡೆಯುತ್ತಿದ್ದಾಗ, ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಕಲಂ 7, 13(1) ಹಾಗೂ 13(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.


ಇದಾದ ನಂತರ, ಇಲಾಖಾ ತನಿಖೆ ನಡೆದಿದ್ದು, ತನಿಖಾಧಿಕಾರಿ ಚಾರ್ಜ್ ಶೀಟ್ ಸಲ್ಲಿಸಲಾಯಿತು. ವಿಚಾರಣೆ ಬಳಿಕ ಶಿಸ್ತು ಪ್ರಾಧಿಕಾರ 2004ರ ಸೆಪ್ಟೆಂಬರ್ 7ರಂದು ಕಡ್ಡಾಯ ನಿವೃತ್ತಿ ಶಿಕ್ಷೆ ವಿಧಿಸಿತ್ತು. ಸದ್ರಿ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ 2016ರಲ್ಲಿ ತಿರಸ್ಕರಿಸಿತ್ತು. ಹಾಗಾಗಿ, ಅರ್ಜಿದಾರ ಕಡ್ಕೋಳ್ ಹೈಕೋರ್ಟ್ ಮೊರೆ ಹೋಗಿದ್ದರು.


50 ರೂಪಾಯಿ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸೇವೆಯಿಂದ ಕಡ್ಡಾಯ ನಿವೃತ್ತಿ ನೀಡಿರುವ ಕ್ರಮ ಸೂಕ್ತವಲ್ಲ ಎಂದು ಅರ್ಜಿದಾರರು ವಾದ ಮಂಡಿಸಿದರು. ಅರ್ಜಿದಾರರ ಬಳಿ ದೂರುದಾರರ ಯಾವುದೇ ಕೆಲಸ ಬಾಕಿ ಇರಲಿಲ್ಲ. ಲಂಚ ಕೇಳಿದ್ದಾರೆ ಎಂಬ ಆರೋಪ ಅರ್ಜಿದಾರರ ವಿರುದ್ಧ ಇರಲಿಲ್ಲ. ಆದರೂ, ಲಂಚ ನೀಡಿದ್ದಾರೆ ಎನ್ನಲಾದ 50 ರೂ ಸಿಕ್ಕಿತ್ತು ಎಂಬ ಕಾರಣಕ್ಕೆ ಅರ್ಜಿದಾರ ನೌಕರನಿಗೆ ಕಡ್ಡಾಯ ನಿವೃತ್ತಿ ಸರಿಯಲ್ಲ ಎಂದು ವಾದಿಸಿದ್ದರು.

Ads on article

Advertise in articles 1

advertising articles 2

Advertise under the article