-->
Consumer Complaint cannot be transferred to High Court- ಗ್ರಾಹಕರ ದೂರುಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಲು ಸಾಧ್ಯವಿಲ್ಲ: ಯೆಸ್ ಬ್ಯಾಂಕ್‌ ಅರ್ಜಿ  ತಿರಸ್ಕರಿಸಿದ ಸುಪ್ರೀಂ ಕೋರ್ಟ್

Consumer Complaint cannot be transferred to High Court- ಗ್ರಾಹಕರ ದೂರುಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಲು ಸಾಧ್ಯವಿಲ್ಲ: ಯೆಸ್ ಬ್ಯಾಂಕ್‌ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಗ್ರಾಹಕರ ದೂರುಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಲು ಸಾಧ್ಯವಿಲ್ಲ: ಯೆಸ್ ಬ್ಯಾಂಕ್‌ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್






ಗ್ರಾಹಕರ ದೂರುಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.



ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ವಿ.ರಾಮಸುಬ್ರಮಣ್ಯನ್ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ.



ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ನವದೆಹಲಿಯ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿ ಸಲ್ಲಿಸಲಾದ ಕೆಲವು ಗ್ರಾಹಕರ ದೂರುಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಬೇಕು ಎಂದು ಕೋರಿ YES ಬ್ಯಾಂಕ್ ಸಲ್ಲಿಸಿದ ವರ್ಗಾವಣೆ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.



"ಗ್ರಾಹಕರ ದೂರುಗಳನ್ನು ಗ್ರಾಹಕ ಸಂರಕ್ಷಣಾ ಕಾಯಿದೆಯಡಿ ದಾಖಲಿಸಲಾಗಿದೆ. ಆದ್ದರಿಂದ ಭಾರತದ ಸಂವಿಧಾನದ 226 ನೇ ವಿಧಿಯ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಇಂತಹ ಗ್ರಾಹಕರ ದೂರುಗಳನ್ನು ಹೈಕೋರ್ಟ್‌ಗೆ ನ್ಯಾಯವ್ಯಾಪ್ತಿಯನ್ನು ವರ್ಗಾಯಿಸಲು ಆಗುವುದಿಲ್ಲ" ಎಂದು ನ್ಯಾಯಪೀಠ ಹೇಳಿದೆ.


ಹೀಗಾಗಿ, ಗ್ರಾಹಕರ ದೂರುಗಳನ್ನು ಹೈಕೋರ್ಟ್‌ಗೆ ವರ್ಗಾವಣೆ ಮಾಡಬೇಕು ಎಂಬ ವಿನಂತಿಯನ್ನು ತಿರಸ್ಕರಿಸಲಾಗಿದೆ ಎಂದು ತೀರ್ಪಿನಲ್ಲಿ ಹೇಳಲಾಗಿದೆ.

Ads on article

Advertise in articles 1

advertising articles 2

Advertise under the article