-->
DC now power to stop building in Agri Land- ಕೃಷಿ ಭೂಮಿಯಲ್ಲಿ ಕಟ್ಟಡ ನಿರ್ಮಾಣ: ತಡೆಯಲು ಡಿಸಿಗೆ ಅಧಿಕಾರ ಇದೆಯೇ..?- ಹೈಕೋರ್ಟ್ ರೂಲಿಂಗ್

DC now power to stop building in Agri Land- ಕೃಷಿ ಭೂಮಿಯಲ್ಲಿ ಕಟ್ಟಡ ನಿರ್ಮಾಣ: ತಡೆಯಲು ಡಿಸಿಗೆ ಅಧಿಕಾರ ಇದೆಯೇ..?- ಹೈಕೋರ್ಟ್ ರೂಲಿಂಗ್

ಕೃಷಿ ಭೂಮಿಯಲ್ಲಿ ಕಟ್ಟಡ ನಿರ್ಮಾಣ: ತಡೆಯಲು ಡಿಸಿಗೆ ಅಧಿಕಾರ ಇದೆಯೇ..?- ಹೈಕೋರ್ಟ್ ರೂಲಿಂಗ್





ಕೃಷಿ ಭೂಮಿಯಲ್ಲಿ ಕಟ್ಟಡ ನಿರ್ಮಾಣ ಮಾಡುವುದನ್ನು ಕರ್ನಾಟಕ ಭೂ ಕಂದಾಯ ಕಾಯ್ದೆ ಅಡಿ ತಡೆಯುವ ಅಧಿಕಾರ ಜಿಲ್ಲಾಧಿಕಾರಿಗೆ ಇಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.



ಕಟ್ಟಡ ನಿರ್ಮಿಸುತ್ತಿರುವ ಜಾಗ ತಮ್ಮದು ಹಾಗೂ ಅದು ಕೃಷಿ ಭೂಮಿಯಾಗಿದ್ದು ಅಲ್ಲಿ ಕಟ್ಟಡ ನಿರ್ಮಾಣ ಮಾಡದಂತೆ ತಡೆಯಲು ಜಿಲ್ಲಾಧಿಕಾರಿಗೆ ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನ ಚಲ್ಲಘಟ್ಟ ನಿವಾಸಿ ಲಕ್ಷಣರೆಡ್ಡಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವೀರಪ್ಪ ಅವರಿದ್ದ ಪೀಠ ಈ ತೀರ್ಪು ನೀಡಿದೆ.


ಪ್ರಕರಣ: ಆರ್. ಲಕ್ಷ್ಮಣ @ ಲಕ್ಷ್ಮಣ ರೆಡ್ಡಿ Vs ಕರ್ನಾಟಕ ಸರ್ಕಾರ ಮತ್ತಿತರರು

ಕರ್ನಾಟಕ ಹೈಕೋರ್ಟ್ (WP 23665/2017) Dated- 17-10-2017


ಅರ್ಜಿದಾರರು ತಮ್ಮ ಕೃಷಿ ಭೂಮಿಯಲ್ಲಿ ಕೆಲ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಅದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗೆ ನಿರ್ದೇಶಿಸುವಂತೆ ಕೋರಿದ್ದಾರೆ. ಆದರೆ, ಅರ್ಜಿದಾರರು ಇದೇ ವಿಚಾರವಾಗಿ ಸಿವಿಲ್ ಕೋರ್ಟ್ ನಲ್ಲಿ ದಾವೆ ಹೂಡಿದ್ದು, ಅಲ್ಲಿ ತಡೆಯಾಜ್ಞೆ ಕೋರಿಕೆ ತಿರಸ್ಕೃತಗೊಂಡಿದೆ. ಈ ವಿಚಾರವನ್ನು ಮುಚ್ಚಿಟ್ಟು ಜಿಲ್ಲಾಧಿಕಾರಿಗೆ ನಿರ್ದೇಶನ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇದು ನ್ಯಾಯಾಂಗ ಪ್ರಕ್ರಿಯೆ ದುರ್ಬಳಕೆಯನ್ನು ಸ್ಪಷ್ಟಪಡಿಸುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.



ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಸೆಕ್ಷನ್ 95(2) ರ ನಿಯಮದಂತೆ ಕೃಷಿ ಭೂಮಿಯಲ್ಲಿ ಕಟ್ಟಡ ನಿರ್ಮಾಣ ಮಾಡದಂತೆ ತಡೆಗಟ್ಟುವ ಅಧಿಕಾರ ಡಿಸಿ ಅವರಿಗೆ ಇದೆ. ಅದನ್ನು ಚಲಾಯಿಸಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.



ಕೃಷಿ ಭೂಮಿಯನ್ನು ಪರಿವರ್ತಿಸಲು ಕೋರಿ ಅರ್ಜಿ ಸಲ್ಲಿಸಿದಾಗ ಅದು ಪರಿವರ್ತನೆಗೆ ಯೋಗ್ಯವೇ ಅಥವಾ ಇಲ್ಲವೇ ಎಂಬ ಕುರಿತಂತೆ ಮಾತ್ರವೇ ಜಿಲ್ಲಾಧಿಕಾರಿ ನಿರ್ಣಯ ಕೈಗೊಂಡು ಇತ್ಯರ್ಥಪಡಿಸಬಹುದು. ಕೃಷಿ ಭೂಮಿಯಲ್ಲಿ ಕಟ್ಟಡ ನಿರ್ಮಿಸುತ್ತಿರುವ ಕುರಿತಂತೆ ಕ್ರಮ ಕೈಗೊಳ್ಳಲಾಗದು. ಈ ಪ್ರಕರಣವು ಸಿವಿಲ್ ವ್ಯಾಜ್ಯವಾಗಿದ್ದು ಇದನ್ನು ಸಿವಿಲ್ ನ್ಯಾಯಾಲಯ ನಿರ್ಣಯಿಸಬಹುದೇ ಹೊರತು ಜಿಲ್ಲಾಧಿಕಾರಿಯಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.


Ads on article

Advertise in articles 1

advertising articles 2

Advertise under the article