Job in Udupi Court- ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ
ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ
ಉಡುಪಿ ಡಿಸ್ಟ್ರಿಕ್ಟ್ ಕೋರ್ಟ್ (ಜಿಲ್ಲಾ ನ್ಯಾಯಾಲಯ)ದಲ್ಲಿ ಜವಾನ ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೈಕೋರ್ಟ್ ನಿರ್ದೇಶನದಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಅಧಿಸೂಚನೆ ಹೊರಡಿಸಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಅರ್ಜಿಗಳನ್ನು ಈ ಕೆಳಗೆ ನೀಡಲಾದ ಉಡುಪಿ ನ್ಯಾಯಾಲಯದ ವೆಬ್ ಸೈಟ್ ಲಿಂಕ್ ಮೂಲಕ ಕೇವಲ ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸಬಹುದಾಗಿದೆ
ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನ: 05-05-2022
ಒಟ್ಟು ಖಾಲಿ ಇರುವ ಹುದ್ದೆ 17
ವೇತನ ಶ್ರೇಣಿ: 17,000/- ನಿಂದ 22,950/- ಹಾಗೂ ಇತರ ಭತ್ಯೆಗಳು
ಶೈಕ್ಷಣಿಕ ವಿದ್ಯಾರ್ಹತೆ: 1) ಅಭ್ಯರ್ಥಿಗಳು SSLC (ಹತ್ತನೇ ತರಗತಿ)ಯಲ್ಲಿ ಪಾಸಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
2) ಕನ್ನಡ ಭಾಷೆ ಓದಲು ಬರೆಯಲು ತಿಳಿದಿರಬೇಕು
3) ವಾಹನ ಚಾಲನಾ ಲೈಸೆನ್ಸ್ ಐಚ್ಛಿಕ
ವಯೋಮಿತಿ: ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ. ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ
ನಿಗದಿತ ಶುಲ್ಕವನ್ನು ವೆಬ್ ಸೈಟ್ ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಟೇಟ್ ಬ್ಯಾಂಕ್ ಆನ್ಲೈನ್ ಚಲನ್ ಸೃಜಿಸಿ ಪಾವತಿಸತಕ್ಕದ್ದು.
ಇದನ್ನು ಹೊರತುಪಡಿಸಿ ಯಾವುದೇ ಡಿಮಾಂಡ್ ರಾಫ್ಟ್ ಪೋಸ್ಟಲ್ ಆರ್ಡರ್ ಅಥವಾ ನಗದು ಹಣವನ್ನು ಸ್ವೀಕರಿಸುವುದಿಲ್ಲ. ಶುಲ್ಕ ಪಾವತಿಸದೆ ಇರುವ ಅರ್ಜಿಗಳನ್ನು ಮತ್ತು ನ್ಯಾಯಾಲಯದ ಖಾತೆಗೆ ಜಮೆ ಮಾಡದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಹೆಚ್ಚಿನ ಮಾಹಿತಿಗಳನ್ನು ಉಡುಪಿ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ ಲಿಂಕ್ ಮೂಲಕ ಪಡೆದುಕೊಳ್ಳಬಹುದು.
Web Link: