2022-23 ಸಾಲಿನ ಸಿವಿಲ್ ಜಡ್ಜ್ ನೇರ ನೇಮಕಾತಿ: 56 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದ ಹೈಕೋರ್ಟ್
2022-23 ಸಾಲಿನ ಸಿವಿಲ್ ಜಡ್ಜ್ ನೇರ ನೇಮಕಾತಿ: 56 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದ ಹೈಕೋರ್ಟ್
ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 56 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಗೆ ಪ್ರಕ್ರಿಯೆ ಆರಂಭವಾಗಿದೆ . ಮತ್ತು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಹಾಕಬಹುದಾಗಿದೆ.
ಕರ್ನಾಟಕ ನ್ಯಾಯಿಕ ಸೇವಾ ನೇಮಕಾತಿ ನಿಯಮಗಳು ಅಡಿಯಲ್ಲಿ ಕರ್ನಾಟಕ ಹೈಕೋರ್ಟ್ ಈ ಅಧಿಸೂಚನೆಯನ್ನು ಹೊರಡಿಸಿದೆ.
ಕನಿಷ್ಠ ವಿದ್ಯಾರ್ಹತೆ:
ನೇರ ನೇಮಕಾತಿಗೆ ಯಾವುದೇ ಮಾನ್ಯತೆ ಪಡೆದ ವಿವಿಯಿಂದ ಕಾನೂನು ಪದವಿ ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಆಗಿರಬೇಕು
ವಯೋಮಿತಿ
ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ. ವಯೋಮಿತಿಯಲ್ಲಿ ಸಡಿಲಿಕೆ ಇದೆ
ಸೇವಾನಿರತ ಅಭ್ಯರ್ಥಿಗಳ ನೇಮಕಾತಿ
ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಿಕ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ, ಪ್ರಾಸಿಕ್ಯೂಷನ್ ಮತ್ತು ಸರಕಾರಿ ವ್ಯಾಜ್ಯ ನಿರ್ವಹಣೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಸರಕಾರಿ ಪ್ರಾಸಿಕ್ಯೂಟರ್ ಹಾಗೂ ಹೆಚ್ಚುವರಿ ಸರಕಾರಿ ನ್ಯಾಯವಾದಿಗಳಿಗೆ ಶೈಕ್ಷಣಿಕ ಅರ್ಹತೆ: ಯಾವುದೇ ಕಾನೂನು ಪದವಿ ಹೊಂದಿರಬೇಕು
ವಯೋಮಿತಿ ಗರಿಷ್ಠ 43 ವಯೋಮಿತಿಯಲ್ಲಿ ಸಡಿಲಿಕೆ ಇದೆ
ನೇಮಕಾತಿ ವಿಧಾನ: ಹೈಕೋರ್ಟ್ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ (ಮುಖ್ಯ ಲಿಖಿತ ಮತ್ತು ಮೌಖಿಕ ಪರೀಕ್ಷೆ) ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯನ್ನು ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23-05-2022
ವೆಬ್‌ಸೈಟ್ ವಿಳಾಸ:
https://karnatakajudiciary.kar.nic.in/civilJudges2022.php
ಅಧಿಸೂಚನೆಗೆ ಇಲ್ಲಿ ಕ್ಲಿಕ್ ಮಾಡಿ
https://karnatakajudiciary.kar.nic.in/recruitmentNotifications/cjr2022/Notiifcation_CJR2022.pdf
ಆಸಕ್ತ ಅರ್ಜಿದಾರರು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಅಧಿಸೂಚನೆಯನ್ನು ಓದಿ ಅದರಲ್ಲಿ ಇರುವ ಸೂಚನೆಗಳ ಪ್ರಕಾರ ಅರ್ಜಿ ಸಲ್ಲಿಸಬಹುದು.