-->
IPL rejected by High Court- ಕರ್ನಾಟಕ ಹೈಕೋರ್ಟ್‌: ನಾಗರಿಕ ಸೇವೆಗಳ ಕಾಯಿದೆ-2022 ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿ ವಜಾ

IPL rejected by High Court- ಕರ್ನಾಟಕ ಹೈಕೋರ್ಟ್‌: ನಾಗರಿಕ ಸೇವೆಗಳ ಕಾಯಿದೆ-2022 ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿ ವಜಾ

ಕರ್ನಾಟಕ ಹೈಕೋರ್ಟ್‌: ನಾಗರಿಕ ಸೇವೆಗಳ ಕಾಯಿದೆ-2022 ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿ ವಜಾ





ಕರ್ನಾಟಕ ಲೋಕಸೇವಾ ಆಯೋಗ (KPSC) ಗೆಜೆಟೆಡ್ ಪ್ರೊಬೇಷನರ್ ಹುದ್ದೆಗೆ 2011ರಲ್ಲಿ ನಡೆಸಿದ್ದ ಪರೀಕ್ಷೆಯ ಅಂತಿಮ ಪಟ್ಟಿಯನ್ನು ಸಿಂಧುಗೊಳಿಸಿ ನೇಮಕಾತಿ ಆದೇಶ ನೀಡುವ ಸಂಬಂಧ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಕರ್ನಾಟಕ ನಾಗರಿಕ ಸೇವೆಗಳ (2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರ್‌ಗಳ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ) ಕಾಯಿದೆ-2022ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿದ್ದ PILನ್ನು ಕರ್ನಾಟಕ ಹೈಕೋರ್ಟ್‌ ವಜಾ ಮಾಡಿದೆ.


ಕಾಯಿದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ PIL ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಈ ಅರ್ಜಿ ಪರಿಗಣನೆಗೆ ಯೋಗ್ಯವಲ್ಲ ಎಂದು ಹೇಳಿತು.


'KPSCಯ ಆಯ್ಕೆ ಪಟ್ಟಿಯನ್ನು ಹಿಂದೆ ಹೈಕೋರ್ಟ್‌ ರದ್ದುಪಡಿಸಿದ್ದು, ಸುಪ್ರೀಂ ಕೋರ್ಟ್‌ ಕೂಡ ಇದನ್ನು ಎತ್ತಿ ಹಿಡಿದಿದೆ. ಆ ಬಳಿಕ 362 ಅಭ್ಯರ್ಥಿಗಳ ಆಯ್ಕೆ ಸಿಂಧುಗೊಳಿಸಿ ನೇಮಕಾತಿ ಆದೇಶ ನೀಡುವ ಸಂಬಂಧ ಸರ್ಕಾರವು ಕರ್ನಾಟಕ ನಾಗರಿಕ ಸೇವೆಗಳ (2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರ್‌ಗಳ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ) ಕಾಯಿದೆ-2022 ಜಾರಿಗೆ ತಂದಿದೆ. ಈ ಮಧ್ಯೆ, 362 ಅಭ್ಯರ್ಥಿಗಳ ನೇಮಕಾತಿ ಪ್ರಶ್ನಿಸಿರುವ ಪ್ರಕರಣವು ಕರ್ನಾಟಕ ರಾಜ್ಯ ಆಡಳಿತ ನ್ಯಾಯಾಧಿಕರಣ (KSAT)ಯಲ್ಲಿ ಬಾಕಿ ಇದೆ. ಅರ್ಜಿದಾರರು ‘ಕರ್ನಾಟಕ ನಾಗರಿಕ ಸೇವೆಗಳ (2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರ್‌ಗಳ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ) ಕಾಯಿದೆ-2022 ಸಂವಿಧಾನ ಬಾಹಿರವಾಗಿದೆ ಎಂಬುದನ್ನು ತೋರಿಸಲು ವಿಫಲವಾಗಿದ್ದಾರೆ. ಹೀಗಾಗಿ, ಮನವಿಗೆ ಯಾವುದೇ ಅರ್ಹತೆ ಇಲ್ಲ' ಎಂದು ಹೇಳಿ ಪೀಠ ಅರ್ಜಿಯನ್ನು ವಜಾ ಮಾಡಿದೆ.


"ಅಭ್ಯರ್ಥಿಗಳ ಆಯ್ಕೆ ಕುರಿತು KPSC ಕಾನೂನುಬಾಹಿರ ಚಟುವಟಿಕೆ ನಡೆಸಿರುವುದು CID ವರದಿಯಿಂದ ಬಹಿರಂಗವಾಗಿದೆ. KPSC ಅಧಿಸೂಚನೆಯನ್ನು ಹೈಕೋರ್ಟ್‌ ವಜಾ ಮಾಡಿದೆ. ಇದನ್ನು ಸುಪ್ರೀಂ ಕೋರ್ಟ್‌ ಸಹ ಎತ್ತಿ ಹಿಡಿದಿದೆ. ಅದಾಗ್ಯೂ, ಆಕ್ಷೇಪಾರ್ಹವಾದ ಕಾಯಿದೆಯನ್ನು ಕಾನೂನುಬಾಹಿರವಾಗಿ ರೂಪಿಸಲಾಗಿದೆ. ಆದ್ದರಿಂದ ಇದಕ್ಕೆ ಕಾನೂನು ಪ್ರಕಾರ ಮಾನ್ಯತೆ ಇಲ್ಲ" ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.


ನೇಮಕಾತಿಗೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಮಾಡಿರಬಹುದು. ಹಾಗೆಂದು ಕಾನೂನು ಸರಿ ಇಲ್ಲ ಎಂದು ಹೇಗೆ ಹೇಳುತ್ತೀರಿ? ಕಾಯಿದೆ ರೂಪಿಸಲು ಕಾರಣಗಳು ಏನಾದರೂ ಇರಬಹುದು. ಒಮ್ಮೆ ಕಾನೂನು ಜಾರಿಗೊಳಿಸಿದ ಮೇಲೆ ಅದು ಹೇಗೆ ಅಕ್ರಮ ಎಂದು ತೋರಿಸಬೇಕು. ನೀವು ನಿರ್ದಿಷ್ಟ ನಿಬಂಧನೆಯನ್ನು ಪ್ರಶ್ನಿಸಿಲ್ಲ. ಬದಲಿಗೆ ಇಡೀ ಕಾಯಿದೆಯ ಸಿಂಧುತ್ವ ಪ್ರಶ್ನೆ ಮಾಡಿದ್ದೀರಿ” ಸಿಜೆ ಅಭಿಪ್ರಾಯಪಟ್ಟರು.


ಕಾನೂನು ಹೇಗೆ ಅಸಾಂವಿಧಾನಿಕ ಎಂದು ಅರ್ಜಿದಾರರು ಹೇಳಬೇಕು. ಕಾನೂನಿನ ನಿಬಂಧನೆಗಳನ್ನು ಕಾಯಿದೆ ಹೇಗೆ ಉಲ್ಲಂಘಿಸುತ್ತದೆ ಎಂಬುದನ್ನು ಅವರು ತೋರಿಸಬೇಕು” ಎಂದು ನ್ಯಾಯಪೀಠ ಹೇಳಿತು.


ಈ ಬಗ್ಗೆ ಪ್ರತ್ಯುತ್ತರ ಮನವಿ ಸಲ್ಲಿಸಲಾಗುವುದು ಎಂದು ವಕೀಲರು ಹೇಳಿದ್ದು, ನ್ಯಾಯಾಲಯ ಅದನ್ನು ತಿರಸ್ಕರಿಸಿತು.


ಆಯ್ಕೆ ಪಟ್ಟಿ ರದ್ದು ಹಿನ್ನೆಲೆಯಲ್ಲಿ ಆಯ್ಕೆಯಾ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಸದನದಲ್ಲಿ ಭಾರೀ ಚರ್ಚೆ ನಡೆದಿತ್ತು. ಹಾಗೂ ಆಯ್ಕೆ ಪಟ್ಟಿಯನ್ನು ಸಿಂಧುಗೊಳಿಸಲು ವಿವಿಧ ಮಠಾಧೀಶರು, ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರು, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಹಿತ ಪಕ್ಷಾತೀತವಾಗಿ ಹಲವು ನಾಯಕರು ಸರ್ಕಾರದ ಮೇಲೆ ಒತ್ತಡ ಹಾಕಿದ್ದ ಕಾರಣ ಈ ಕಾಯಿದೆ ಜಾರಿಗೆ ತರಲಾಗಿದೆ.

Ads on article

Advertise in articles 1

advertising articles 2

Advertise under the article