-->
Muslim Women also eligible for Alimony - ವಿಚ್ಚೇದಿತ ಮುಸ್ಲಿಂ ಮಹಿಳೆಗೂ ಜೀವನಾಂಶದ ಹಕ್ಕಿದೆ: ಅಲಹಾಬಾದ್ ಹೈಕೋರ್ಟ್

Muslim Women also eligible for Alimony - ವಿಚ್ಚೇದಿತ ಮುಸ್ಲಿಂ ಮಹಿಳೆಗೂ ಜೀವನಾಂಶದ ಹಕ್ಕಿದೆ: ಅಲಹಾಬಾದ್ ಹೈಕೋರ್ಟ್

ವಿಚ್ಚೇದಿತ ಮುಸ್ಲಿಂ ಮಹಿಳೆಗೂ ಜೀವನಾಂಶ ಹಕ್ಕಿದೆ: ಅಲಹಾಬಾದ್ ಹೈಕೋರ್ಟ್






ವಿಚ್ಚೇದಿತ ಮುಸ್ಲಿಂ ಮಹಿಳೆಯರೂ ಸಹ ಅಪರಾಧ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 125 ರ ಅಡಿಯಲ್ಲಿ ತಮ್ಮ ವಿಚ್ಚೇದಿತ ಪತಿಯಿಂದ ಜೀವನಾಂಶ ಪಡೆಯುವ ಹಕ್ಕನ್ನು ಹೊಂದಿದ್ದಾರೆ ಮತ್ತು ಅವರು ಅದನ್ನು ಇದ್ದತ್ ಅವಧಿಯ ನಂತರವೂ ಪಡೆಯಬಹುದು ಅಲಹಾಬಾದ್ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.



ಮರುಮದುವೆ ಗುವವರೆಗೂ ವಿಚ್ಚೇದಿತ ಮಹಿಳೆಯರಿಗೆ ಈಕ್ಕು ಇದೆ ಎಂದು ಹೈಕೋರ್ಟ್‌ನ ಲಕ್ನೋ ಪೀಠ ತನ್ನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.




ಅರ್ಜಿದಾರರಾದ ರಜಿಯಾ ಸಲ್ಲಿಸಿದ್ದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ಇತ್ಯರ್ಥಪಡಿಸಿದ ನ್ಯಾಯಮೂರ್ತಿ ಕರುಣೇಶ್ ಸಿಂಗ್ ಪವಾರ್ ಅವರ ಪೀಠವು ಈ ತೀರ್ಪು ನೀಡಿದೆ. ಪ್ರತಾಪ ಗಢದ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ 2008ರಲ್ಲಿ ಅರ್ಜಿದಾರರು ಈ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.




ಮುಸ್ಲಿಂ ಮಹಿಳಾ (ವಿಚ್ಛೇದನದ ಮೇಲಿನ ಹಕ್ಕುಗಳ ರಕ್ಷಣೆ) ಕಾಯ್ದೆಯನ್ನು ಪರಿಚಯಿಸಿದ ನಂತರ, ಅರ್ಜಿದಾರರು ಮತ್ತು ಆಕೆಯ ಪತಿಯ ಪ್ರಕರಣವು ಅದೇ ಕಾಯ್ದೆಗೆ ಒಳಪಟ್ಟಿರುತ್ತದೆ ಎಂದು ಸೆಷನ್ಸ್ ನ್ಯಾಯಾಲಯವು ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿತ್ತು. 



ಸದರಿ ಕಾಯ್ದೆಯ ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ, ಮುಸ್ಲಿಂ ವಿಚ್ಛೇದಿತ ಪತ್ನಿ ಮಾತ್ರ ಜೀವನಾಂಶವನ್ನು ಪಡೆಯಲು ಅರ್ಹಳಾಗಿದ್ದಾಳೆ ಎಂದು ಸೆಷನ್ಸ್ ನ್ಯಾಯಾಲಯ ಹೇಳಿದೆ. CRPC ಸೆಕ್ಷನ್ 125 ಅಂತಹ ಸಂದರ್ಭಗಳಲ್ಲಿ ಅನ್ವಯಿಸುವುದಿಲ್ಲ.


2ನೇ ಮದುವೆ ಆಗುವವರೆಗೆ ಮಾತ್ರ ಜೀವನಾಂಶ

ಇದೇ ವೇಳೆ, ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ನ್ಯಾಯಪೀಠ ಬದಿಗಿರಿಸಿತು. ಶಬಾನಾ ಬಾನೋ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ನಂತರ, ಮುಸ್ಲಿಂ ವಿಚ್ಛೇದಿತ ಮಹಿಳೆಗೆ ಇದ್ದತ್ ಅವಧಿಯ ನಂತರವೂ ಸೆಕ್ಷನ್ 125 ರ ಅಡಿಯಲ್ಲಿ ಜೀವನಾಂಶ ಪಡೆಯಲು ಹಕ್ಕಿದೆ ಎಂದು ನಿರ್ಧರಿಸಲಾಗಿದೆ ಎಂದು ಹೇಳಿದೆ. 



ಇದ್ದತ್ ಎಂದರೆ, ಪತಿಯ ಮರಣ ಅಥವಾ ವಿಚ್ಚೇದನ ಅಥವಾ ವಿಚ್ಚೇನಾ ನಂತರ ಒಂದು ನಿರ್ದಿಷ್ಟ ಅವಧಿಯವರೆಗೆ ದೂರವಿರುವುದನ್ನು ಇದ್ದತ್ ಎನ್ನುತ್ತಾರೆ.


Ads on article

Advertise in articles 1

advertising articles 2

Advertise under the article