-->
ಚೆಕ್‌ಬೌನ್ಸ್ ಪ್ರಕರಣದಲ್ಲಿ ಏಕಪಕ್ಷೀಯ ಆದೇಶ?: ಕಾಯ್ದೆಗೆ ತಿದ್ದುಪಡಿ ಮಾಡಲು ಹೈಕೋರ್ಟ್ ಸಲಹೆ

ಚೆಕ್‌ಬೌನ್ಸ್ ಪ್ರಕರಣದಲ್ಲಿ ಏಕಪಕ್ಷೀಯ ಆದೇಶ?: ಕಾಯ್ದೆಗೆ ತಿದ್ದುಪಡಿ ಮಾಡಲು ಹೈಕೋರ್ಟ್ ಸಲಹೆ

ಚೆಕ್‌ಬೌನ್ಸ್ ಪ್ರಕರಣದಲ್ಲಿ ಏಕಪಕ್ಷೀಯ ಆದೇಶ?: ಕಾಯ್ದೆಗೆ ತಿದ್ದುಪಡಿ ಮಾಡಲು ಹೈಕೋರ್ಟ್ ಸಲಹೆ






ಚೆಕ್‌ಬೌನ್ಸ್ ಪ್ರಕರಣಗಳಲ್ಲಿ ಆರೋಪಿಯ ಅನುಪಸ್ಥಿತಿಯ ನಡುವೆಯೇ ವಿಚಾರಣೆಯನ್ನು ಮುಂದುವರಿಸಲು ಅನುಕೂಲವಾಗುವಂತೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (Cr.PC) ಅಥವಾ ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಕಾಯಿದೆ 1881 ಗೆ ವಿಶೇಷ ಕಾನೂನಿಗೆ ಸೂಕ್ತವಾದ ತಿದ್ದುಪಡಿ ಮಾಡಲು ಸರ್ಕಾರಗಳು ಗಂಭೀರ ಚಿಂತನೆ ಮಾಡಬೇಕೆಂದು ಕರ್ನಾಟಕ ಹೈಕೋರ್ಟ್ ಸಲಹೆ ಮಾಡಿದೆ.



ಅಲ್ಲದೆ, ಅಂತಹ ತಿದ್ದುಪಡಿಗಳು ಬಹುಶಃ ಸಮನ್ಸ್ ಜಾರಿಯಿಂದ ತಪ್ಪಿಸಿಕೊಳ್ಳುವ ಅಥವಾ ಅವರ ವಿರುದ್ಧ ವಾರಂಟ್ ಜಾರಿಗೊಳಿಸುವುದನ್ನು ಆಶ್ರಯಿಸುವ ಅಂಶಗಳನ್ನು ತಡೆಯಬಹುದಾಗಿದೆ ಎಂದು ಹೈಕೋರ್ಟ್ ಹೇಳಿದೆ.



ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯಪೀಠ, ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮತ್ತು ಸೆಷನ್ಸ್ ನ್ಯಾಯಾಲಯವು ನೀಡಿದ ಎರಡು ಪ್ರತ್ಯೇಕ ತೀರ್ಪುಗಳನ್ನು ರದ್ದುಗೊಳಿಸಿದ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದೆ.


ಕುರುಡಾಗಿ ಅವಲಂಬನೆ:


"ನ್ಯಾಯಾಧೀಶರು ಆ ನಿರ್ಧಾರಗಳಲ್ಲಿ ಹೇಳಲಾದ ತತ್ವಗಳ ನಿಜವಾದ ಉದ್ದೇಶವನ್ನು ಅರ್ಥಮಾಡಿಕೊಳ್ಳದೆ ಕೇಸ್ ಕಾನೂನಿನ ಮೇಲೆ ಕುರುಡಾಗಿ ಅವಲಂಬಿತವಾಗಿದ್ದರೆ ನ್ಯಾಯದಾನ ಹಳಿ ತಪ್ಪುತ್ತದೆ ಎಂಬುದಕ್ಕೆ ವಿಚಾರಣಾ ಕೋರ್ಟ್‌ನ ತೀರ್ಪು ಒಂದು ಉತ್ತಮ ಉದಾಹರಣೆಯಾಗಿದೆ ಎಂದು ಹಿಂಜರಿಕೆಯಿಲ್ಲದೆ ಹೇಳಬಹುದು. ಕಾನೂನಿನ ಮೊದಲ ತತ್ವಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ'' ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.




ಸುಪ್ರೀಂಕೋರ್ಟ್‌ನ ತೀರ್ಪನ್ನು ಅರ್ಥಮಾಡಿಕೊಳ್ಳುವಲ್ಲಿ ವಿಚಾರಣಾ ನ್ಯಾಯಾಲಯವು ತಪ್ಪಸಗಿದೆ ಎಂದಿರುವ ನ್ಯಾಯಾಲಲಯ, ಸಿವಿಲ್ ಪ್ರಕ್ರಿಯಾ ಸಂಹಿತೆಯಲ್ಲಿ ಕಂಡುಬರುವ ರೀತಿಯಲ್ಲಿ ಆರೋಪಿಗೆ ಸಮನ್ಸ್ ಅಥವಾ ನೋಟಿಸ್ ಜಾರಿಯಾಗದಿದ್ದಾಗ ಅನುಪಸ್ಥಿತಿಯಲ್ಲಿ ಏಕಪಕ್ಷೀಯವಾಗಿ ಆದೇಶ ನೀಡಲು ಸಿಆರ್ ಪಿಸಿ ಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿತು.



"ವೇಗದ ವಿಚಾರಣೆಯು ಕ್ರಿಮಿನಲ್ ವಿಚಾರಣೆಯಲ್ಲಿ ಹಂತಗಳನ್ನು ಜಿಗಿಯುವ ಅರ್ಥವನ್ನು ತೆಗೆದುಕೊಳ್ಳುವುದಿಲ್ಲ" ಎಂದು ಹೈಕೋರ್ಟ್ ಉಲ್ಲೇಖಿಸಿ, ಯಾವುದೇ ಕಾರಣಕ್ಕಾಗಿ ಆರೋಪಿಯ ಉಪಸ್ಥಿತಿಯು ಆರೋಪಿಯ ಅನುಪಸ್ಥಿತಿಯಲ್ಲಿ ಸಾಕ್ಷ್ಯವನ್ನು ದಾಖಲಿಸಲು ಕಾನೂನಿಗೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಸೂಚಿಸಿತು.


ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿದ ಮ್ಯಾಜಿಸ್ಟ್ರೇಟ್, ದೂರುದಾರರು ಸಲ್ಲಿಸಿದ ದಾಖಲೆಗಳ ಆಧಾರದ ಮೇಲೆ ಆರೋಪಿಯ ವಿರುದ್ಧ ಸಾಕ್ಷ್ಯಾಧಾರಗಳು ಇರುವುದರಿಂದ ಅವರ ಉಪಸ್ಥಿತಿಯ ಅಗತ್ಯವಿಲ್ಲ ಎಂದು ಹೇಳಿದೆ. ಉಡುಪಿಯ ಸೆಷನ್ಸ್ ನ್ಯಾಯಾಲಯವು 2019 ರಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಈ ತೀರ್ಪು ಒಪ್ಪಿದೆ. ಆದರೂ ಏಕಪಕ್ಷೀಯ ತೀರ್ಮಾನ ಸರಿಯಲ್ಲ ಎಂದು ನ್ಯಾಯಪೀಠ ಹೇಳಿದೆ.



ಹೈಕೋರ್ಟ್ ಪ್ರಕರಣವನ್ನು ಮತ್ತೊಮ್ಮೆ ವಿಚಾರಣೆ ನಡೆಸಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸೂಚಿಸಿದ್ದು, ಆರೋಪಿ ಮತ್ತು ದೂರುದಾರರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.


ಪ್ರಕರಣದ ಹಿನ್ನೆಲೆ:

ಉಡುಪಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 2018ರಲ್ಲಿ ಒಬ್ಬ ಶಿವಮೊಗ್ಗ ಜಿಲ್ಲೆಯ ಜಿ.ಎಚ್.ಅಬ್ದುಲ್ ಖಾದ್ರಿ ಅವರನ್ನು ಕನ್ವಿಕ್ಟ್ ಮಾಡಿ, ಅಪರಾಧಿ ಎಂದು ಘೊಷಿಸಿತ್ತು. ಅವರು ಉಡುಪಿ ಜಿಲ್ಲೆಯ ಮೊಹಮ್ಮದ್ ಇಕ್ಬಾಲ್ ಅವರಿಗೆ ತಲಾ ₹ 50 ಸಾವಿರದ ಐದು ಚೆಕ್‌ಗಳನ್ನು ನೀಡಿದ್ದರು, ಅವುಗಳ ಬೌನ್ಸ್ ಆದರೂ ಪ್ರಕರಣ ದಾಖಲಾಗಿದ್ದರೂ, ಸಮನ್ಸ್ ಜಾರಿಯಾಗಿದ್ದರೂ ಅವರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿರಲಿಲ್ಲ. ಆದರೂ, ಆರೋಪಿಯ ಅನುಪಸ್ಥಿತಿಯಲ್ಲಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ನ್ಯಾಯಾಲಯ ಘೋಷಿಸಿತ್ತು.

Ads on article

Advertise in articles 1

advertising articles 2

Advertise under the article