-->
Karnataka CJ Avasthi send-off | ದೇಶದ ಅತ್ಯುತ್ತಮ ಹೈಕೋರ್ಟ್‌ಗಳಲ್ಲಿ ಕರ್ನಾಟಕವೂ ಒಂದು: ಋತುರಾಜ್ ಅವಸ್ಥಿ

Karnataka CJ Avasthi send-off | ದೇಶದ ಅತ್ಯುತ್ತಮ ಹೈಕೋರ್ಟ್‌ಗಳಲ್ಲಿ ಕರ್ನಾಟಕವೂ ಒಂದು: ಋತುರಾಜ್ ಅವಸ್ಥಿ

ದೇಶದ ಅತ್ಯುತ್ತಮ ಹೈಕೋರ್ಟ್‌ಗಳಲ್ಲಿ ಕರ್ನಾಟಕವೂ ಒಂದು: ಋತುರಾಜ್ ಅವಸ್ಥಿ





ಕರ್ನಾಟಕ ಹೈಕೋರ್ಟ್‌ ದೇಶದ ಅತ್ಯುತ್ತಮ ಹೈಕೋರ್ಟ್‌ಗಳಲ್ಲೊಂದು... ಹೀಗೆ ಮೆಚ್ಚುಗೆಯ ಮಳೆ ಸುರಿಸಿದವರು ಕರ್ನಾಟಕ ಹೈಕೋರ್ಟ್‌ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ.


'ಕರ್ನಾಟಕ ಹೈಕೋರ್ಟ್‌ ಸಿಜೆ ಹುದ್ದೆ ನನ್ನ ಪಾಲಿನ ಸುವರ್ಣಾವಕಾಶ ಎಂದು ಪರಿಗಣಿಸಿದ್ದೇನೆ. ಈ ಸಂಸ್ಥೆಯಲ್ಲಿ ನನ್ನ ಶಕ್ತಿ ಮೀರಿ ಸೇವೆ ಸಲ್ಲಿಸಿದ ಭಾವ ನನ್ನಲ್ಲಿದೆ" ಎಂದು ತಮ್ಮ ಬೀಳ್ಕೊಡುಗೆ ಭಾಷಣದಲ್ಲಿ ಮೆಚ್ಚುಗೆ ಸೂಚಿಸಿದರು.


ಮುಖ್ಯ ನ್ಯಾಯಮೂರ್ತಿ ಅವಸ್ಥಿ ಸೇವಾ ನಿವೃತ್ತಿ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್‌ 'ಬೀಳ್ಕೊಡುಗೆ ಸಮಾರಂಭ' ಏರ್ಪಡಿಸಿತು. ಆ ಕಾರ್ಯಕ್ರಮದಲ್ಲಿ ಅವಸ್ಥಿ ತಮ್ಮ ಸೇವಾ ಜೀವನವನ್ನು ನೆನೆದು ಮನಬಿಚ್ಚಿ ಮಾತನಾಡಿದರು.



"ಕರ್ನಾಟಕದ ಹಲವು ಜಿಲ್ಲೆಗಳಿಗೆ ಕಳೆದ 8-9 ತಿಂಗಳಲ್ಲಿ ಭೇಟಿ ನೀಡಿದ್ದೇನೆ. ವಿವಿಧತೆಯಲ್ಲಿ ಏಕತೆಯನ್ನು ಇಲ್ಲಿ ನಾನು ಕಂಡಿದ್ದೇನೆ. ಒಂದು ರಾಜ್ಯ, ಹಲವು ದೇಶ ಎಂಬ ಮಾತು ಇಲ್ಲಿಗೆ ಸರಿಯಾಗಿ ಹೊಂದುತ್ತದೆ” ಎಂದು ನಾಡಿನ ಸಾಂಸ್ಕೃತಿಕ ವೈವಿಧ್ಯ, ಬಹುತ್ವದ ಬಗ್ಗೆ ಅವಸ್ಥಿ ಮೆಚ್ಚುಗೆ ಸೂಚಿಸಿದರು.



"ಕರ್ನಾಟಕದ ಸಿಜೆ ಆಗಿ, ಅದಕ್ಕೂ ಮುನ್ನ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಒಟ್ಟು 44 ಸಾವಿರ ಪ್ರಕರಣಗಳನ್ನು ವಿಲೇವಾರಿ ಮಾಡಿದ್ದೇನೆ. ಅದರಲ್ಲಿ 500ಕ್ಕೂ ಹೆಚ್ಚು ಬಹುಮುಖ್ಯ ಕಾನೂನಿನ ಪ್ರಶ್ನೆಗಳನ್ನು ಒಳಗೊಂಡ ಪ್ರಕರಣಗಳು..." ಎಂದು ತಮ್ಮ ಸೇವಾವಧಿಯನ್ನು ಅವರು ಅವಲೋಕಿಸಿದರು.




"ಪೀಠಾಸೀನ ಅಧಿಕಾರಿಗಳು ಶಿಸ್ತು, ಬದ್ಧತೆಯಿಂದ ಕೂಡಿದ್ದು ಅವರ ನಡೆ ನಿಷ್ಪಪಕ್ಷಪಾತ ಮತ್ತು ಪಾರದರ್ಶಕ ಆಗಿರಬೇಕಾಗುತ್ತದೆ. ಯಾವುದೇ ಪಕ್ಷಪಾತವಿಲ್ಲದೇ ಅಲಹಾಬಾದ್‌ ಹೈಕೋರ್ಟ್‌ ಮತ್ತು ಕರ್ನಾಟಕ ಹೈಕೋರ್ಟ್‌ ಸಿಜೆ ಆಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ನನ್ನ ತತ್ವಗಳಲ್ಲಿ ಎಂದೂ ರಾಜಿ ಮಾಡಿಕೊಂಡಿಲ್ಲ" ಎಂದು ಅವರು ವಿವರಿಸಿದರು.


'22 ವರ್ಷಗಳ ಕಾಲ ವಕೀಲನಾಗಿ ಕೆಲಸ ಮಾಡಿದ ನಂತರ 2009ರಲ್ಲಿ ಅಲಹಾಬಾದ್‌ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿದ್ದೇನೆ. ಅಲಹಾಬಾದ್‌ ಹೈಕೋರ್ಟ್‌ ವಕೀಲರ ವೃಂದ ಮತ್ತು ನ್ಯಾಯಮೂರ್ತಿಗಳಿಂದ ನಾನು ಸಾಕಷ್ಟು ಕಲಿತಿದ್ದೇನೆ” ಎಂದು ತಮ್ಮ ಹಳೆ ವಕೀಲಿಕೆ ದಿನಗಳನ್ನು ನೆನೆದರು.




"ವಕೀಲರ ಬದುಕು ಸವಾಲಿನಿಂದ ಕೂಡಿರುತ್ತದೆ. ವಕೀಲನಾಗಿ ಶ್ರಮವಹಿಸಿದ್ದು ಮತ್ತು ನನಗೆ ಸಿಕ್ಕ ಅವಕಾಶಗಳಿಂದ ಸಾಕಷ್ಟು ತೃಪ್ತಿ ಪಡೆದಿದ್ದೇನೆ. ನ್ಯಾಯಮೂರ್ತಿಯಾಗಿ ಮಾಡಿದ ಸೇವೆ ಹೋಲಿಸಿದರೆ ವಕೀಲಿಕೆ ವೃತ್ತಿಯನ್ನು ಅನುಭವಿಸಿದ್ದು, ಸಾಕಷ್ಟು ತೃಪ್ತಿ ಪಡೆದಿದ್ದೇನೆ" ಎಂದರು.




"ವಕೀಲಿಕೆ ಆರಂಭಿಸಿದಾಗ ನಾನು ಯಾರಿಗೂ ಗೊತ್ತಿರಲಿಲ್ಲ. ವೃತ್ತಿ ಜೀವನದಲ್ಲಿ ಹಲವು ಪ್ರಮುಖ ಮತ್ತು ಸವಾಲಿನ ಪ್ರಕರಣಗಳಲ್ಲಿ ವಾದ ಮಂಡಿಸಿದ್ದೇನೆ. ನಾನು ನ್ಯಾಯಮೂರ್ತಿಯಾಗಿ ನೇಮಕವಾಗಿ ಚೇಂಬರ್‌ ಬಿಟ್ಟಾಗ 5 ಸಾವಿರಕ್ಕೂ ಅಧಿಕ ಪ್ರಕರಣಗಳು ನನ್ನ ಬಳಿ ಬಾಕಿ ಇದ್ದವು" ಎಂದು ವಿವರಿಸಿದರು.




"ರಾಜ್ಯದ ಜನರ ಅಪಾರ-ಪ್ರೀತಿ ವಿಶ್ವಾಸದಿಂದ, ನಾನು ನನಗೆ ಹೊರಗಿನವನು ಎನಿಸಿಲ್ಲ. ಸಾಕಷ್ಟು ನೆನಪುಗಳನ್ನು ಇಲ್ಲಿಂದ ನಾನು ಒಯ್ಯುತ್ತಿದ್ದೇನೆ" ಎಂದರು.



ಕರ್ನಾಟಕ ಹೈಕೋರ್ಟ್‌ನಲ್ಲಿ ಆನ್‌ಲೈನ್‌ ಗೇಮಿಂಗ್‌, ಹಿಜಾಬ್‌ ನಿಷೇಧ ಸೇರಿದಂತೆ ಹಲವು ಮಹತ್ವದ ತೀರ್ಪುಗಳನ್ನು ಸಿಜೆ ಅವಸ್ಥಿ ನೀಡಿದ್ದಾರೆ. ನ್ಯಾಯಾಂಗದ ಸುಧಾರಣೆಗೆ ಅವರು ಸಾಕಷ್ಟು ಒತ್ತು ನೀಡಿದ್ದಾರೆ ಎಂದು ಹಂಗಾಮಿ ಸಿಜೆ ಅಲೋಕ್ ಅರಾಧೆ ಸ್ಮರಿಸಿದರು.

Ads on article

Advertise in articles 1

advertising articles 2

Advertise under the article