ಸಿವಿಲ್ ನ್ಯಾಯಾಧೀಶರ ನೇಮಕಾತಿ-2022: ಮುಖ್ಯ ಪರೀಕ್ಷೆಗೆ ದಿನ ನಿಗದಿ
ಸಿವಿಲ್ ನ್ಯಾಯಾಧೀಶರ ನೇಮಕಾತಿ: ಮುಖ್ಯ ಪರೀಕ್ಷೆಗೆ ದಿನ ನಿಗದಿ
ರಾಜ್ಯದ ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಮತ್ತು ಸಿವಿಲ್ ನ್ಯಾಯಾಧೀಶರ ಆಯ್ಕೆ ಸಮಿತಿ ದಿನ ನಿಗದಿಪಡಿಸಿದೆ.
ಈ ಬಗ್ಗೆ ಹೈಕೋರ್ಟ್ ಅಧಿಸೂಚನೆ ಹೊರಡಿಸಿದ್ದು, ಸೆಪ್ಟೆಂಬರ್ 10 ಮತ್ತು 11ರಂದು ಮುಖ್ಯ ಪರೀಕ್ಷೆ ನಡೆಯಲಿದೆ.
ಮುಖ್ಯ ಲಿಖಿತ ಪರೀಕ್ಷೆಗಳು ಬೆಂಗಳೂರಿನಲ್ಲಿ ಇರುವ ಕರ್ನಾಟಕ ಹೈಕೋರ್ಟ್ ನ ಪ್ರಧಾನ ಪೀಠ, ಹೈಕೋರ್ಟ್ ಮತ್ತು ಬೆಂಗಳೂರಿನ ಕೆ.ಆರ್. ವೃತ್ತದಲ್ಲಿ ಇರುವ ಶ್ರೀ ಕೃಷ್ಣರಾಜೇಂದ್ರ ಸಿಲ್ವರ್ ಜ್ಯೂಬಿಲಿ ಟೆಕ್ನಲಾಜಿಕಲ್ ಇನ್ಸ್ಟಿಟ್ಯುಟ್ ಇಲ್ಲಿ ನಡೆಯಲಿವೆ.
ಅರ್ಹ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಕರ್ನಾಟಕ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಇದನ್ನು ಡೌನ್‌ಲೋಡ್ ಮಾಡಿಕೊಂಡು, ಅದರಲ್ಲಿ ನೀಡಿರುವ ಸೂಚನೆಗಳನ್ನು ಪಾಲಿಸತಕ್ಕದ್ದು ಎಂದು ಕರ್ನಾಟಕ ಹೈಕೋರ್ಟ್‌ನ ಪ್ರಭಾರ ರಿಜಿಸ್ಟ್ರಾರ್ ಜನರಲ್ ಮತ್ತು ಸಿವಿಲ್ ನ್ಯಾಯಾಧೀಶರ ನೇಮಕಾತಿ ಸಮಿತಿ ಕಾರ್ಯದರ್ಶಿ ಶ್ರೀ ಮುರಳೀಧರ ಪೈ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.