-->
ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ: ನ್ಯಾಯಪೀಠಕ್ಕೆ ಐವರ ಸೇರ್ಪಡೆ

ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ: ನ್ಯಾಯಪೀಠಕ್ಕೆ ಐವರ ಸೇರ್ಪಡೆ

ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ: ನ್ಯಾಯಪೀಠಕ್ಕೆ ಐವರ ಸೇರ್ಪಡೆ





ಐವರು ಹೆಚ್ಚುವರಿ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸಿದ್ದು, ಇದರೊಂದಿಗೆ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.

ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಒಟ್ಟು 62 ನ್ಯಾಯಮೂರ್ತಿಗಳಷ್ಟು ಹುದ್ದೆ ಸಾಮರ್ಥ್ಯ ಹೊಂದಿದೆ.


16-08-2022ರಂದು ಪ್ರಮಾಣ ವಚನ ಸ್ವೀಕರಿಸಿದ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ವಿವರ ಇಲ್ಲಿದೆ;



ಟಿ ಜಿ ಶಿವಶಂಕರೇಗೌಡ,


ಚಂದ್ರಶೇಖರ ಮೃತ್ಯುಂಜಯ ಜೋಶಿ,


ಅನಿಲ್‌ ಭೀಮಸೇನ ಕಟ್ಟಿ,


ಗುರುಸಿದ್ದಯ್ಯ ಬಸವರಾಜ


ಉಮೇಶ್‌ ಮಂಜುನಾಥ್‌ ಭಟ್‌ ಅಡಿಗ


ಈ ಐವರಿಗೆ ಘನತೆವೆತ್ತ ರಾಜ್ಯಪಾಲರಾದ ಶ್ರೀ ತಾವರೆ ಚಂದ್ ಗೆಹ್ಲೊಟ್ ಪ್ರಮಾಣ ವಚನ ಬೋಧಿಸಿದರು. ರಾಜ್ಯಪಾಲರ ನಿವಾಸ ರಾಜಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಂಗಾಮಿ ಸಿಜೆಐ ಅಲೋಕ್ ಅರಾಧೆ, ಸಿಎಂ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.



ಕಳೆದ ಜುಲೈ 19ರಂದು ಈ ಐವರು ನ್ಯಾಯಮೂರ್ತಿಗಳ ಹೆಸರನ್ನು ಸುಪ್ರಿಂ ಕೋರ್ಟ್ ಕೊಲೀಜಿಯಂ ಹೆಸರಿಸಿತ್ತು. ಈ ಹಿನ್ನೆಲೆಯಲ್ಲಿ ಇವರನ್ನು ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.



ಪ್ರಮಾಣ ವಚನ ಸ್ವೀಕರಿಸಿದ ನ್ಯಾ. ಅನಿಲ್‌ ಕಟ್ಟಿ ಅಧಿಕಾರ ವಹಿಸಿಕೊಳ್ಳುವ ದಿನದಿಂದ 2024ರ ಏಪ್ರಿಲ್‌ 16ರವರೆಗೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿರಲಿದ್ದಾರೆ. ನ್ಯಾ. ಜಿ ಬಸವರಾಜ, ಚಂದ್ರಶೇಖರ ಮೃತ್ಯುಂಜಯ ಜೋಶಿ, ಉಮೇಶ್‌ ಮಂಜುನಾಥ್‌ ಭಟ್‌ ಅಡಿಗ ಮತ್ತು ಟಿ. ಜಿ. ಶಿವಶಂಕರೇಗೌಡ ಅಧಿಕಾರವಹಿಸಿಕೊಂಡ ದಿನದಿಂದ ಎರಡು ವರ್ಷಗಳವರೆಗೆ ಹೈಕೋರ್ಟ್‌ನ ಈ ಗೌರವಯುತ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.



Ads on article

Advertise in articles 1

advertising articles 2

Advertise under the article