-->
DV Act: ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ-2005: ದ.ಕ. ಜಿಲ್ಲೆಯ ಅಧಿಕಾರಿ ವರ್ಗಕ್ಕೆ ಕಾನೂನು ಕಾರ್ಯಾಗಾರ

DV Act: ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ-2005: ದ.ಕ. ಜಿಲ್ಲೆಯ ಅಧಿಕಾರಿ ವರ್ಗಕ್ಕೆ ಕಾನೂನು ಕಾರ್ಯಾಗಾರ

DV Act: ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ-2005: ದ.ಕ. ಜಿಲ್ಲೆಯ ಅಧಿಕಾರಿ ವರ್ಗಕ್ಕೆ ಕಾನೂನು ಕಾರ್ಯಾಗಾರ





ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯ ರಕ್ಷಣೆ ಕಾಯ್ದೆ-2005 (Protection of Women from Domestic Violence Act 2005) ಬಗ್ಗೆ ಮಾಹಿತಿ ನೀಡುವ ಎರಡು ದಿನಗಳ ಕಾನೂನು ಕಾರ್ಯಾಗಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.


ಮಂಗಳೂರು ನಗರದ ಇರುವ ಜಿಲ್ಲಾ ಪಂಚಾಯತ್‌ ನೇತ್ರಾವತಿ ಸಭಾಂಗಣದಲ್ಲಿ ನಡೆದ ಕಾನೂನು ಕಾರ್ಯಾಗಾರವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ. ಜಿ. ಶೋಭಾ ಅವರು ಉದ್ಘಾಟಿಸಿದರು.



ಕೌಟುಂಬಿಕ ದೌರ್ಜನ್ಯ ಕಾಯ್ದೆ ಮತ್ತು ಮಹಿಳೆಯ ಸಂರಕ್ಷಣೆ ಕಾನೂನಿನ ಅರಿವು ಕುರಿತಂತೆ ನ್ಯಾಯವಾದಿ ಸುಕೇಶ್ ಕುಮಾರ್ ಶೆಟ್ಟಿ ಉಪನ್ಯಾಸ ನೀಡಿದರು.



ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಸರ್ಕಾರಿ ಅಭಿಯೋಜಕರು, ಸರ್ಕಾರಿ ವಕೀಲರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಂರಕ್ಷಣಾ ಅಧಿಕಾರಿಗಳು, ಸಖಿ ಒನ್ ಸ್ಟಾಪ್ ಸೆಂಟರ್ ಆಡಳಿತಾಧಿಕಾರಿಗಳು ಮತ್ತು ಕಾನೂನು ಸಲಹೆಗಾರರು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಕಾನೂನು ಮಾಹಿತಿಯನ್ನು ಪಡೆದುಕೊಂಡರು.



ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ನಗರ ಸಂಶೋಧನಾ ಕೇಂದ್ರದ ನಿರ್ದೇಶಕಿ ಹರಿಣಿ, ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀ ಟಿ. ಪಾಪ ಬೋವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.



ಎರಡು ದಿನಗಳ ಕಾರ್ಯಾಗಾರದಲ್ಲಿ ಹಿರಿಯ ನ್ಯಾಯವಾದಿ ಹಾಗೂ ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್.ಪಿ. ಚಂಗಪ್ಪ, CWC ಮಾಜಿ ಅಧ್ಯಕ್ಷ ಹಾಗೂ ನ್ಯಾಯವಾದಿ ನಿಕೇಶ್ ಶೆಟ್ಟಿ, ಗೌರಿ ಪೈ, ಹರಿಣಿ ಮೊದಲಾದವರು ಸಂಪನ್ಮೂಲ ವ್ಯಕ್ತಿಗಳಾಗಿ ಕಾನೂನು ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡರು.

Ads on article

Advertise in articles 1

advertising articles 2

Advertise under the article