ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ 'ಬಾಲ್ಯ ವಿವಾಹ ಮುಕ್ತ ಭಾರತ' ಕಾರ್ಯಾಗಾರ
ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ 'ಬಾಲ್ಯ ವಿವಾಹ ಮುಕ್ತ ಭಾರತ' ಕಾರ್ಯಾಗಾರ
ಬಾಲ್ಯ ವಿವಾಹ ಪದ್ಧತಿ ಸಾಮಾಜಿಕ ಪಿಡುಗಾಗಿದ್ದು, ಇದರ ನಿರ್ಮೂಲನೆಗೆ ಎಲ್ಲರೂ ಕಟಿಬದ್ಧರಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ವಕೀಲರಾದ ಸುಕೇಶ್ ಕುಮಾರ್ ಶೆಟ್ಟಿ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿಯಾಗಿ ಮಂಗಳೂರಿನ ಕುತ್ತಾರು ಪದವು ಬಾಲ ಸಂರಕ್ಷಣಾ ಕೇಂದ್ರದಲ್ಲಿ ಆಯೋಜಿಸಿದ ಬಾಲ್ಯವಿವಾಹ ಮುಕ್ತ ಭಾರತ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡುತ್ತಿದ್ದರು.
ಸಂಸತ್ತಿನಲ್ಲಿ ಮಂಡಿಸಲಾಗಿರುವ ಬಾಲ್ಯ ವಿವಾಹ ಕಾಯ್ದೆ-2021 ಮತ್ತು ಈಗಿರುವ ಕಾನೂನಿನ ಬಗ್ಗೆ ಮಾಹಿತಿ ನೀಡಿದರು.
ಹಿರಿಯ ಪ್ಯಾನೆಲ್ ವಕೀಲರಾದ ಹರೀಶ್ಚಂದ್ರ ಅವರು ಪ್ರಾಧಿಕಾರದಿಂದ ದೊರೆಯುವ ಕಾನೂನು ಸೇವೆಗಳ ಬಗ್ಗೆ ವಿವರಿಸಿದರು. ಮಂಗಳೂರಿನ ವಿವಿಧ ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕಾರಿ ರೂಪೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಕುಮಾರ್ ಶೆಟ್ಟಿಗಾರ್, ರಕ್ಷಣಾಧಿಕಾರಿ ವಜೀರ್ ಅಹ್ಮದ್, ಬಾಲ ಸಂರಕ್ಷಣಾ ಕೇಂದ್ರದ ವಾರ್ಡನ್ ಸರು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಕಾವೇರಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.