-->
ಎಫ್‌ಐಆರ್ ವರ್ಗಾವಣೆ: ತಕ್ಷಣ ಸಂಬಂಧಿಸಿದ ನ್ಯಾಯಾಲಯಕ್ಕೆ ಮಾಹಿತಿ- ಪೊಲೀಸ್ ಇಲಾಖೆಗೆ ಹೈಕೋರ್ಟ್ ಆದೇಶ

ಎಫ್‌ಐಆರ್ ವರ್ಗಾವಣೆ: ತಕ್ಷಣ ಸಂಬಂಧಿಸಿದ ನ್ಯಾಯಾಲಯಕ್ಕೆ ಮಾಹಿತಿ- ಪೊಲೀಸ್ ಇಲಾಖೆಗೆ ಹೈಕೋರ್ಟ್ ಆದೇಶ

ಎಫ್‌ಐಆರ್ ವರ್ಗಾವಣೆ: ತಕ್ಷಣ ಸಂಬಂಧಿಸಿದ ನ್ಯಾಯಾಲಯಕ್ಕೆ ಮಾಹಿತಿ- ಪೊಲೀಸ್ ಇಲಾಖೆಗೆ ಹೈಕೋರ್ಟ್ ಆದೇಶ





ಅಪರಾಧ ಪ್ರಕರಣಗಳಲ್ಲಿ ದಾಖಲಾಗುವ ಪ್ರಥಮ ವರ್ತಮಾನ ವರದಿ(FIR)ಯನ್ನು ಒಂದು ಪೊಲೀಸ್ ಠಾಣೆಯಿಂದ ಇನ್ನೊಂದು ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದಾಗ ತಕ್ಷಣವೇ ಸಂಬಂಧಿಸಿದ ನ್ಯಾಯಾಲಯಕ್ಕೆ ಮಾಹಿತಿ ನೀಡುವುದು ಕಡ್ಡಾಯ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.



ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಗೆ ಹಾಗೂ ಸರ್ಕಾರಿ ಅಭಿಯೋಜಕರಿಗೆ ಸುತ್ತೋಲೆ ಹೊರಡಿಸಬೇಕು ಎಂದು ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ತನ್ನ ಆದೇಶದಲ್ಲಿ ಸೂಚಿಸಿದೆ.



ಪ್ರಕರಣದ ವಿವರ:

ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದಾಖಲಿಸಲಾದ FIRನ್ನು ಇನ್ನೊಂದು ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. FIR ವರ್ಗಾವಣೆಗೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿತ್ತು.



ಈ ಬಗ್ಗೆ FIR ದಾಖಲಾದ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯಾಯಾಲಯಕ್ಕೆ ಪೊಲೀಸರು ಮಾಹಿತಿ ನೀಡಿಲಿಲ್ಲ. ಈ ಸಂವಹನದ ಕೊರತೆಯಿಂದಾಗಿ ಆರೋಪಿಗೆ ಡಿಫಾಲ್ಟ್ ಜಾಮೀನು ನೀಡಲಾಗಿತ್ತು.



ಇದನ್ನು ಗಮನಿಸಿದ ನ್ಯಾ. ಪಿ.ಎನ್. ದೇಸಾಯಿ ಅವರಿದ್ದ ಪೀಠ ಈ ಆದೇಶ ನೀಡಿದೆ.

ಸಹಾಯಕ ಸರ್ಕಾರಿ ಅಭಿಯೋಜಕರು ಮತ್ತು ತನಿಖಾಧಿಕಾರಿಗಳು ಎಫ್‌ಐಆರ್‌ ವರ್ಗಾವಣೆ ಮತ್ತು ಆರೋಪ ಪಟ್ಟಿ ಸಲ್ಲಿಕೆ ಮಾಡುವ ಬಗ್ಗೆ ಸಂಬಂಧಿಸಿದ ಕೋರ್ಟ್‌ಗಳಿಗೆ ಮಾಹಿತಿ ನೀಡುವಲ್ಲಿ ಎಚ್ಚರ ವಹಿಸುತ್ತಿಲ್ಲ ಎಂದು ನ್ಯಾಯಪೀಠ ಬೇಸರ ವ್ಯಕ್ತಪಡಿಸಿತು.



ಯಾವುದೇ ಕೋರ್ಟ್‌ಗೆ ಆರೋಪ ಪಟ್ಟಿ ಸಲ್ಲಿಕೆಯಾದ ಕೂಡಲೇ ಅದರ ಸಂಖ್ಯೆ ಮತ್ತು ದಿನಾಂಕವನ್ನು ನ್ಯಾಯಾಧೀಶರು ನಮೂದಿಸಬೇಕು. ಮತ್ತು ಇದನ್ನು ಪರಿಶೀಲಿಸಿ ಆದೇಶದಲ್ಲಿ ಟಿಪ್ಪಣಿ ಲಗತ್ತಿಸಲು ಕ್ಲರ್ಕ್‌ಗೆ ನಿರ್ದೇಶನ ನೀಡಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

Ads on article

Advertise in articles 1

advertising articles 2

Advertise under the article