ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ಪ್ರಸನ್ನ ಬಾಲಚಂದ್ರ ವರಾಳೆ ಅಧಿಕಾರ ಸ್ವೀಕಾರ
ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ಪ್ರಸನ್ನ ಬಾಲಚಂದ್ರ ವರಾಳೆ ಅಧಿಕಾರ ಸ್ವೀಕಾರ
ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಗೌ. ಪ್ರಸನ್ನ ಬಾಲಚಂದ್ರ ವರಾಳೆ ಅಧಿಕಾರ ಸ್ವೀಕರಿಸಿದರು.
ಬೆಂಗಳೂರಿನಲ್ಲಿ ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. . ಮಾನ್ಯ ರಾಜ್ಯಪಾಲ ಥಾವರ ಚಂದ್ ಗೆಹ್ಲಟ್ ನ್ಯಾ. ವರಾಳೆ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ರಾಜ್ಯದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಹಿರಿಯ ಸಚಿವ ಗೋವಿಂದ ಕಾರಜೋಳ, ಹೈಕೋರ್ಟ್ ನ್ಯಾ. ಪಿ. ಎಸ್. ದಿನೇಶ್ ಕುಮಾರ್, ಬಿ. ವೀರಪ್ಪ, ಆರ್. ದೇವದಾಸ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಹಾಗೂ ನ್ಯಾಯಾಂಗ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ನೇತೃತ್ವದ ಕೊಲಿಜಿಯಂ ನ್ಯಾ. ವರಾಳೆ ಪದೋನ್ನತಿಗೆ ಶಿಫಾರಸು ಮಾಡಿತ್ತು.
1985ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡು ವೃತ್ತಿ ಜೀವನ ಆರಂಭಿಸಿದ ನ್ಯಾಯಮೂರ್ತಿ ವರಾಳೆ ವಕೀಲರಾದ ಎಸ್ ಎನ್ ಲೋಯಾ ಅವರ ಬಳಿ ಆರಂಭದಲ್ಲಿ ವರಾಳೆ ವೃತ್ತಿ ಜೀವನ ಆರಂಭಿಸಿದ್ದರು.
ಆ ಬಳಿಕ 1992ರ ವರೆಗೆ ಔರಂಗಾ ಬಾದ್ ಅಂಬೇಡ್ಕರ್ ಲಾ ಕಾಲೇಜ್ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ತದನಂತರ ಜುಲೈ 18, 2008 ರಂದು ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಹುದ್ದೆ ನಿಭಾಯಿಸಿದ್ದರು.