ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಬೀದಿಗಿಳಿದ ವಕೀಲರು: ಸರ್ಕಾರಕ್ಕೆ ಉಭಯಸಂಕಟ!
ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಬೀದಿಗಿಳಿದ ವಕೀಲರು: ಸರ್ಕಾರಕ್ಕೆ ಉಭಯಸಂಕಟ!
ಬೆಳಗಾವಿ ಅಧಿವೇಶನದಲ್ಲೇ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಮಂಡಿಸಿ ಅನುಮೋದನೆ ಪಡೆಯಬೇಕು ಎಂದು ಆಗ್ರಹಿಸಿ ವಕೀಲರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ನೇತೃತ್ವದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ವಕೀಲರು ಸರ್ಕಾರಕ್ಕೆ ತಮ್ಮ ಹಕ್ಕೊತ್ತಾಯ ಮಂಡಿಸಲಿದ್ದಾರೆ. ಇದಕ್ಕೆ ಬೆಂಬಲಾರ್ಥವಾಗಿ ರಾಜ್ಯಾದ್ಯಂತ ವಕೀಲರು, ವಕೀಲರ ಸಂಘಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
ರಾಜ್ಯದಲ್ಲಿ ವಿವಿಧ ಕಡೆ ವಕೀಲರ ಮೇಲೆ ಹಲ್ಲೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದರೂ ಯಾವುದೇ ದೃಢ ಕ್ರಮ ಕೈಗೊಳ್ಳದಿರುವುದು ವಕೀಲರನ್ನು ಚಿಂತೆಗೀಡು ಮಾಡಿದೆ.
ತಮ್ಮ ಸಂರಕ್ಷಣೆಗೆ ಈಗಾಗಲೇ ಜಾರಿಯ ಹಂತದಲ್ಲಿ ಇರುವ ವಕೀಲರ ಸಂರಕ್ಷಣಾ ಕಾಯ್ದೆ ಮಂಡಿಸಲೇ ಬೇಕು ಎಂದು ವಕೀಲರು ಪಟ್ಟು ಹಿಡಿದಿದ್ದಾರೆ.
ಈ ಮಧ್ಯೆ, ಉತ್ತರ ಕನ್ನಡದಲ್ಲಿ ನಡೆದಿದ್ದ ನೋಟರಿ ವಕೀಲರ ಸಮ್ಮೇಳನದಲ್ಲಿ ಕಾನೂನು ಸಚಿವ ಜೆ. ಮಾಧುಸ್ವಾಮಿ, ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿದ್ದರು. ಇದಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದ ವಿವೇಕ್ ಸುಬ್ಬಾರೆಡ್ಡಿ ನೇತೃತ್ವದಲ್ಲಿ ವಕೀಲರ ನಿಯೋಗ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಮಂಡಿಸಿ ಅನುಮೋದನೆ ಪಡೆಯಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿತ್ತು.
ಆ ಸಭೆಯಲ್ಲೇ ಮುಖ್ಯಮಂತ್ರಿಯವರು ಕಾಯ್ದೆಯನ್ನು ಜಾರಿಗೆ ತರುವ ಭರವಸೆಯನ್ನೂ ನೀಡಿದ್ದರು. ಆದರೆ, ಇದೀಗ ಅಂತಹ ಪ್ರಸ್ತಾಪ ಇಲ್ಲ ಎಂಬ ಗುಮಾನಿ ವಕೀಲರ ಸಮುದಾಯದಲ್ಲಿ ಹರಡಿದೆ. ಚುನಾವಣೆಗೆ ಸಜ್ಜಾಗುತ್ತಿರುವ ಹೊತ್ತಿನಲ್ಲೇ ಪ್ರಬಲ ವೃತ್ತಿಪರ ಸಮುದಾಯದ ಬೇಡಿಕೆಯನ್ನು ಈಡೇರಿಸಲೇ ಬೇಕಾದ ಅನಿವಾರ್ಯತೆ ಸರ್ಕಾರಕ್ಕೆ ಎದುರಾಗಿದೆ.
ಇದನ್ನೂ ಓದಿ:
ಲೋಕ ಅದಾಲತ್ ಡಿಕ್ರಿಯನ್ನು ರದ್ದುಪಡಿಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಮಹಿಳಾ ಕಾನೂನು ದುರುಪಯೋಗ: ಮಹತ್ವದ ಸುಪ್ರೀಂ ಕೋರ್ಟ್‌ನ ಮಹತ್ವದ ಜಡ್ಜ್‌ಮೆಂಟ್‌ಗಳು!
ಕ್ರಿಮಿನಲ್ ಪ್ರಕರಣಗಳಲ್ಲಿ ಸಾಕ್ಷ್ಯದ ಮಹತ್ವ, ಪೂರ್ವಭಾವನೆ ಮತ್ತು ಸಾಕ್ಷ್ಯದ ಮೌಲ್ಯೀಕರಣ