ರಾಜ್ಯದಲ್ಲಿ ಎಷ್ಟು ಸರ್ಕಾರಿ ವಕೀಲರ ಹುದ್ದೆ ಖಾಲಿ ಇದೆ..? ಸರ್ಕಾರದ ಉತ್ತರಕ್ಕೆ ಸದನದಲ್ಲಿ ಅಚ್ಚರಿ!
ರಾಜ್ಯದಲ್ಲಿ ಎಷ್ಟು ಸರ್ಕಾರಿ ವಕೀಲರ ಹುದ್ದೆ ಖಾಲಿ ಇದೆ..? ಸರ್ಕಾರದ ಉತ್ತರಕ್ಕೆ ಸದನದಲ್ಲಿ ಅಚ್ಚರಿ!
ರಾಜ್ಯದಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ.. ಎಷ್ಟು ಮಂದಿ ಸರ್ಕಾರಿ ವಕೀಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬ ಪ್ರತಿಪಕ್ಷ ಶಾಸಕರೊಬ್ಬರ ಪ್ರಶ್ನೆಗೆ ಸರ್ಕಾರ ನೀಡಿದ ಉತ್ತರ ಎಲ್ಲರನ್ನೂ ಅಚ್ಚರಿಗೊಳ್ಳುವಂತೆ ಮಾಡಿದೆ.
ರಾಜ್ಯದಲ್ಲಿ ಈಗ ಎಷ್ಟು ಮಂದಿ ಸರ್ಕಾರಿ ವಕೀಲರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಜೆಡಿಎಸ್ ಶಾಸಕ ಬಂಡೆಪ್ಪ ಖಾಶೆಂಪುರ್ ಕಾನೂನು ಸಚಿವರಿಗೆ ಪ್ರಶ್ನೆ ಕೇಳಿದ್ದರು.
ಈ ಪ್ರಶ್ನೆಗೆ ಉತ್ತರ ನೀಡಿದ ಸಂಸದೀಯ ವ್ಯವಹಾರಗಳು ಮತ್ತು ಕಾನೂನು ಸಚಿವ ಜೆ. ಮಾಧುಸ್ವಾಮಿ, ರಾಜ್ಯದಲ್ಲಿ ಈಗ 215 ಸರ್ಕಾರಿ ವಕೀಲರು ಸೇವೆ ಸಲ್ಲಿಸುತ್ತಿದ್ದಾರೆ. ಈಗ ಅಗತ್ಯ ಇರುವಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಹಾಗೂ ಸರ್ಕಾರಿ ವಕೀಲರ ಯಾವುದೇ ಖಾಲಿ ಹುದ್ದೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸರ್ಕಾರದ ಅಂಕಿ ಅಂಶಗಳ ಪ್ರಕಾರ, ರಾಜ್ಯದ ಆಡ್ವೊಕೇಟ್ ಜನರಲ್ ಕಚೇರಿಯಲ್ಲಿ 83 ಸರ್ಕಾರಿ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನು ರಾಜ್ಯದ ವಿವಧೆಡೆ 132 ಸರ್ಕಾರಿ ವಕೀಲರು ಸೇರಿ ಒಟ್ಟು 215 ಸರ್ಕಾರಿ ವಕೀಲರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಸಚಿವರು ಮಾಹಿತಿ ಒದಗಿಸಿದ್ದಾರೆ.
ಅಗತ್ಯಕ್ಕೆ ಅನುಗುಣವಾಗಿ ಸರ್ಕಾರ ವಕೀಲರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ತನ್ನ ಉತ್ತರದಲ್ಲಿ ತಿಳಿಸಿದೆ.
ಇದನ್ನೂ ಓದಿ
20 ವರ್ಷಗಳ ಕಾಲಬದ್ಧ ವೇತನ ಭಡ್ತಿ: ಸರ್ಕಾರಿ ಆದೇಶ ಪೂರ್ವಾನ್ವಯಗೊಳಿಸಿ ಜಾರಿ- ಹೈಕೋರ್ಟ್ ಮಹತ್ವದ ಆದೇಶ
ಸರ್ಕಾರಿ ನೌಕರರ ಪದೋನ್ನತಿ: ಭಾಗ್ಯದ ಬಾಗಿಲು ತೆರೆದ ಮಹತ್ವದ ಸುಪ್ರೀಂ ಕೋರ್ಟ್ ತೀರ್ಪು
ವಿಮೆ ಪರಿಹಾರಕ್ಕೆ HDFC ಹಿಂದೇಟು: ಬಿಸಿ ಮುಟ್ಟಿಸಿದ ಗ್ರಾಹಕ ನ್ಯಾಯಾಲಯ, ಬಡ್ಡಿ ಸಹಿತ 30 ಲಕ್ಷ ಪಾವತಿಗೆ ಆದೇಶ
ಮಹಿಳಾ ನ್ಯಾಯಾಧೀಶರಿಗೆ ಚಾಕು ತೋರಿಸಿ ಬೆದರಿಸಿದ ಆರೋಪಿ: ಕೋರ್ಟನ್ನೇ ಬೆಚ್ಚಿಬೀಳಿಸಿದ ಪ್ರಸಂಗ!