ಸಂಚಾರಿ ಪೀಠ ರದ್ದು! ಮೂಡಬಿದಿರೆಗೆ ಖಾಯಂ ಹಿರಿಯ ಸಿವಿಲ್ ನ್ಯಾಯಾಲಯ ಮಂಜೂರು
ಸಂಚಾರಿ ಪೀಠ ರದ್ದು! ಮೂಡಬಿದಿರೆಗೆ ಖಾಯಂ ಹಿರಿಯ ಸಿವಿಲ್ ನ್ಯಾಯಾಲಯ ಮಂಜೂರು
ಮೂಡಬಿದಿರೆ ತಾಲೂಕು ಕೇಂದ್ರದಲ್ಲಿ ಹಿರಿಯ ಸಿವಿಲ್ ನ್ಯಾಯಾಲಯ ಅಸ್ತಿತ್ವಕ್ಕೆ ಬಂದಿದೆ. ಈ ಬಗ್ಗೆ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಈ ಹಿಂದೆ ಮೂಡಬಿದರೆಯಲ್ಲಿ ವಾರದಲ್ಲಿ ಎರಡು ದಿನಗಳ ಕಾಲ "ಮಂಗಳೂರಿನ ಮೂರನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ನ್ಯಾಯಾಲಯ" ಸಂಚಾರಿ ಪೀಠವಾಗಿ ಕಾರ್ಯಾಚರಿಸುತ್ತಿತ್ತು.
ಮಂಗಳೂರಿನ ಮೂರನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ನ್ಯಾಯಾಲಯದ ಸಂಚಾರಿ ಪೀಠವನ್ನು ಮೂಡಬಿದರೆಗೆ ಸ್ಥಳಾಂತರಿಸಿ "ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ನ್ಯಾಯಾಲಯ, ಮೂಡಬಿದರೆ" ಎಂದು ಮರು ನಾಮಾಂಕಿತಗೊಳಿಸಲಾಗಿದ್ದು, ಈ ಬಗ್ಗೆ ರಾಜ್ಯ ಸರಕಾರವು ಸುತ್ತೋಲೆ ಹೊರಡಿಸಿದೆ.
ಈ ಮೂಲಕ ಮೂಡಬಿದರೆ ತಾಲೂಕಿಗೆ ಖಾಯಂ ಹಿರಿಯ ಸಿವಿಲ್ ನ್ಯಾಯಾಲಯ ಮಂಜೂರಾಗಿದೆ.
----------------------------------------------------------------------------------------------------------
ಇದನ್ನೂ ಓದಿ
20 ವರ್ಷಗಳ ಕಾಲಬದ್ಧ ವೇತನ ಭಡ್ತಿ: ಸರ್ಕಾರಿ ಆದೇಶ ಪೂರ್ವಾನ್ವಯಗೊಳಿಸಿ ಜಾರಿ- ಹೈಕೋರ್ಟ್ ಮಹತ್ವದ ಆದೇಶ
ಸರ್ಕಾರಿ ನೌಕರರ ಪದೋನ್ನತಿ: ಭಾಗ್ಯದ ಬಾಗಿಲು ತೆರೆದ ಮಹತ್ವದ ಸುಪ್ರೀಂ ಕೋರ್ಟ್ ತೀರ್ಪು
ವಿಮೆ ಪರಿಹಾರಕ್ಕೆ HDFC ಹಿಂದೇಟು: ಬಿಸಿ ಮುಟ್ಟಿಸಿದ ಗ್ರಾಹಕ ನ್ಯಾಯಾಲಯ, ಬಡ್ಡಿ ಸಹಿತ 30 ಲಕ್ಷ ಪಾವತಿಗೆ ಆದೇಶ
ಮಹಿಳಾ ನ್ಯಾಯಾಧೀಶರಿಗೆ ಚಾಕು ತೋರಿಸಿ ಬೆದರಿಸಿದ ಆರೋಪಿ: ಕೋರ್ಟನ್ನೇ ಬೆಚ್ಚಿಬೀಳಿಸಿದ ಪ್ರಸಂಗ!