ಕ್ರಿಮಿನಲ್ ಪ್ರಕರಣ ಎದುರಿಸಿದ ವ್ಯಕ್ತಿಗೆ ಉದ್ಯೋಗ ನಿರಾಕರಿಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಕ್ರಿಮಿನಲ್ ಪ್ರಕರಣ ಎದುರಿಸಿದ ವ್ಯಕ್ತಿಗೆ ಉದ್ಯೋಗ ನಿರಾಕರಿಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಒಬ್ಬ ವ್ಯಕ್ತಿ ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾನೆ ಎಂಬ ಕಾರಣಕ್ಕೆ ಉದ್ಯೋಗದ ಹಕ್ಕನ್ನು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ನ್ಯಾ. ಎಂ ಆರ್ ಷಾ ಮತ್ತು ನ್ಯಾ. ಸಿ ಟಿ ರವಿಕುಮಾರ್ ನೇತೃತ್ವದ ಸುಪ್ರೀಂ ಕೋರ್ಟಿನ ನ್ಯಾಯಪೀಠ ಈ ಮಹತ್ವದ ಆದೇಶ ನೀಡಿದೆ.
ಸುಮಾರು ಎರಡು ವರ್ಷಗಳ ಹಿಂದೆ ತನ್ನ ಪತ್ನಿಗೆ ಹಿಂಸೆ ನೀಡಿದ ಪ್ರಕರಣದಲ್ಲಿ ವ್ಯಕ್ತಿ ಭಾಗಿಯಾಗಿದ್ದಾನೆ ಎಂಬ ಕಾರಣಕ್ಕೆ ಆ ವ್ಯಕ್ತಿಗೆ ಉದ್ಯೋಗ ನಿರಾಕರಿಸಲಾಗಿತ್ತು.
ಮಧ್ಯಪ್ರದೇಶ ಹೈಕೋರ್ಟ್ ವಿಭಾಗೀಯ ಪೀಠ ನೀಡಿದದ್ದ ತೀರ್ಪಿನ ವಿರುದ್ಧ ಪ್ರಮೋದ್ ಸಿಂಗ್ ಕಿರಾರ್ ಸುಪ್ರೀಂ ಕೋರ್ಟ್ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಪೀಠ, 2001 ರಲ್ಲಿ ಏನೇ ನಡೆದರೂ ಸೆಕ್ಷನ್ 498 ಎ ಅಡಿಯಲ್ಲಿ ಅಪರಾಧದ ಕ್ರಿಮಿನಲ್ ಪ್ರಕರಣದಲ್ಲಿ ಅರ್ಜಿದಾರರು 2006ರಲ್ಲಿ ಖುಲಾಸೆಗೊಂಡಿದ್ದಾರೆ ಎಂಬುದನ್ನು ಗಮನಿಸಿತು.
ಪ್ರಕರಣದ ವಿವರ:
ಅರ್ಜಿದಾರರಾದ ಪ್ರಮೋದ್ ಸಿಂಗ್ ಕಿರಾರ್ 2013-2014ನೇ ಸಾಲಿನ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಆಯ್ಕೆಯಾಗಿದ್ದರು. ಆದರೆ, ಪ್ರಮೋದ್ ಅವರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498A ಅಡಿಯಲ್ಲಿ ಪ್ರಕರಣ ಎದುರಿಸಿದ್ದಾರೆ ಎಂಬ ಕಾರಣಕ್ಕೆ ಅವರಿಗೆ ಸರ್ಕಾರಿ ಉದ್ಯೋಗ ನಿರಾಕರಿಸಲಾಗಿತ್ತು.
ನೇಮಕಾತಿ ಸಮಿತಿಯ ನಿರ್ಧಾರವನ್ನು ಪ್ರಶ್ನಿಸಿ ಅರ್ಜಿದಾರರು ಮಧ್ಯಪ್ರದೇಶ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟಿನ ವಿಭಾಗೀಯ ಪೀಠ ಪ್ರಮೋದ್ ಅವರ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಸುಪ್ರೀಂ ಕೋರ್ಟಿನ ಕದ ತಟ್ಟಿದ್ದರು.
ಮೇಲ್ಮನವಿದಾರರಿಗೆ 2013-2014 ನೇ ಸಾಲಿನಲ್ಲಿ ನೇಮಕಾತಿಯನ್ನು ನಿರಾಕರಿಸಬಾರದು ಎಂಬುದಾಗಿ ಸುಪ್ರೀಂ ನ್ಯಾಯಪೀಠ ಸ್ಪಷ್ಟವಾಗಿ ತಿಳಿಸಿದೆ.
2016ರಲ್ಲಿ ಪ್ರಮೋದ್ ಮತ್ತು ಅವರ ಪತ್ನಿ ಇಬ್ಬರೂ ಪರಸ್ಪರ ಸಮ್ಮತಿಯಿಂದ ರಾಜಿಯಾಗಿದ್ದನ್ನು ಕೋರ್ಟ್ ಗಮನಿಸಿತು. ಹೀಗಾಗಿ, 2013-2014ನೇ ಸಾಲಿನ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಆಯ್ಕೆಯಾಗಿರುವ ವ್ಯಕ್ತಿ ಉದ್ಯೋಗ ನಿರಾಕರಣೆ ಮಾಡುವುದು ಸೂಕ್ತವಲ್ಲ ಎಂದು ನ್ಯಾಯಪೀಠ ತೀರ್ಪು ನೀಡಿದೆ.
ಪ್ರಕರಣ: ಪ್ರಮೋದ್ ಸಿಂಗ್ ಕಿರಾರ್ Vs ಮಧ್ಯಪ್ರದೇಶ
ಸುಪ್ರೀಂ ಕೋರ್ಟ್, CA 14571/2022 Dated 2-12-2022
Read This Also:
ವಯೋವೃದ್ಧ ಮನೆ ಬಾಗಿಲಿಗೆ ತೆರಳಿ ಮನವಿ ಸ್ವೀಕರಿಸಿ ನ್ಯಾಯಾಧೀಶರು
ಲಾಯರ್ ಫೀಸಿಗೂ ಕೋರ್ಟ್ ಆದೇಶಕ್ಕೂ ಸಂಬಂಧವಿಲ್ಲ; ಕೇಸು ಗುಣವಾಗದಿದ್ದರೆ ಅದು ವಕೀಲರ ನಂಬಿಕೆ ದ್ರೋಹವಲ್ಲ
ಹೆರಿಗೆಗೆ 6 ಸಾವಿರ ಲಂಚಕ್ಕೆ ಬೇಡಿಕೆ: ಇಬ್ಬರು ಮಹಿಳಾ ವೈದ್ಯರು ಸಸ್ಪೆಂಡ್
.