ಶಿಕ್ಷಕರ ನೇಮಕಾತಿ: ವಿವಾಹಿತ ಮಹಿಳಾ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ
ಶಿಕ್ಷಕರ ನೇಮಕಾತಿ: ವಿವಾಹಿತ ಮಹಿಳಾ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ
ಪೋಷಕರ ಆದಾಯ ಪ್ರಮಾಣ ಪತ್ರ ಸಲ್ಲಿಸಿದ್ದ ವಿವಾಹಿ ವಿವಾಹಿತ ಮಹಿಳಾ ಅಭ್ಯರ್ಥಿಗಳನ್ನು ಪರಿಗಣಿಸಿ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಅಂತಿಮ ಆಯ್ಕೆ ಪಟ್ಟಿಯನ್ನು ತರಿತವಾಗಿ ಪ್ರಕಟಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ.
2022ರ ಮಾರ್ಚ್ ನಲ್ಲಿ 15000 ಶಿಕ್ಷಕರ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. 68,849 ಅಭ್ಯರ್ಥಿಗಳು ಸಿಇಟಿ ಬರೆದಿದ್ದರು. ಈಚೆಗೆ 13,363 ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು.
ಈ ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂಬ ಕಾರಣಕ್ಕೆ ವಿವಾಹಿತ ಮಹಿಳಾ ಅಭ್ಯರ್ಥಿಗಳನ್ನು ಕೈ ಬಿಡಲಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿ 300ಕ್ಕೂ ಹೆಚ್ಚು ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಗಳನ್ನು ಇತ್ಯರ್ಥ ಮಾಡಿದ್ದ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ಆದೇಶ ನೀಡಿದ್ದು, ಹೈಕೋರ್ಟ್ ಪೀಠದ ಅಂತಿಮ ತೀರ್ಪಿಗೆ ಒಳಪಡುವ ಶರತ್ತಿನ ಮೇರೆಗೆ ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.
ಪ್ರಕರಣದಲ್ಲಿ ಸರಕಾರದ ಪರವಾಗಿ ಅಂತಿಮ ತೀರ್ಪು ಬರುವ ವಿಶ್ವಾಸ ಇದೆ. ಕೆಲವು ಅಭ್ಯರ್ಥಿಗಳು ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇರುತ್ತದೆ. ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.