ವಕೀಲರ ಸಂರಕ್ಷಣಾ ಕಾಯ್ದೆ: ಸೋಮವಾರ ನಿರ್ಣಾಯಕ ಹೋರಾಟಕ್ಕೆ ಕರೆ
ವಕೀಲರ ಸಂರಕ್ಷಣಾ ಕಾಯ್ದೆ: ಸೋಮವಾರ ನಿರ್ಣಾಯಕ ಹೋರಾಟಕ್ಕೆ ಕರೆ
ವಕೀಲರ ಸಂರಕ್ಷಣಾ ಕಾಯ್ದೆಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಒತ್ತಡ ಹೇರಲು ಸೋಮವಾರ ನಿರ್ಣಾಯಕ ಹೋರಾಟಕ್ಕೆ ಬೆಂಗಳೂರು ವಕೀಲರ ಸಂಘ ಕರೆ ನೀಡಿದೆ.
ಬೆಂಗಳೂರು ವಕೀಲರ ಸಂಘ ಅಧ್ಯಕ್ಷರು ಹಾಗೂ ಹೈಕೋರ್ಟ್ ಹಿರಿಯ ವಕೀಲರಾದ ವಿವೇಕ್ ಸುಬ್ಬಾರೆಡ್ಡಿ ಹಾಗೂ ಪದಾಧಿಕಾರಿಗಳು ಈ ಕರೆ ನೀಡಿದ್ದು, ಬೃಹತ್ ಹೋರಾಟದಲ್ಲಿ ಎಲ್ಲರೂ ಕೈಜೋಡಿಸುವಂತೆ ವಕೀಲ ಸಮುದಾಯಕ್ಕೆ ಕರೆ ನೀಡಿದ್ದಾರೆ.
ವಕೀಲರ_ಸಂರಕ್ಷಣಾ_ಕಾಯಿದೆ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಬೆಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಫೆಬ್ರವರಿ_13ರಂದು ಸೋಮವಾರ ಬೃಹತ್ ಹೋರಾಟ ರಾಜ್ಯಾದ್ಯಂತ ನಿಗದಿಯಾಗಿದೆ. ಈ ಪ್ರಯುಕ್ತ ರಾಜಧಾನಿಯಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಎಲ್ಲಾ ವಕೀಲ ಮಿತ್ರರೂ ಸೋಮವಾರ ಬೆಳಗ್ಗೆ 10.30 ಕ್ಕೆ ಸಿಟಿ ಸಿವಿಲ್ ಕೋರ್ಟ್ ನ ಧ್ವಜ ಕಂಬದ ಬಳಿ ಸೇರಲು ಕೋರಲಾಗಿದೆ. ಮಧ್ಯಾಹ್ನ 12.30ಕ್ಕೆ ಸಿಟಿ ಸಿವಿಲ್ ಕೋರ್ಟ್ ನಿಂದ Rally ಹೊರಡಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
\ಇದನ್ನೂ ಓದಿ
ವಕೀಲರ ಸಂರಕ್ಷಣಾ ಕಾಯ್ದೆ: ನ್ಯಾಯವಾದಿಗಳು ಮತ್ತೆ ಹೋರಾಟದ ಕಣಕ್ಕೆ
ನಿವೃತ್ತರ ಬಾಳಿಗೆ ಬೆಳಕಾದ NPS: ಮಾಹಿತಿ ಹಕ್ಕಿನಲ್ಲಿ ಸಿಕ್ಕ ವಾಸ್ತವ ಸಂಗತಿ ಇದು..!