ಬ್ಯಾಕ್‌ಲಾಗ್ ಸಹಿತ 57 ಸಿವಿಲ್ ನ್ಯಾಯಾಧೀಶರ ಹುದ್ದೆಗೆ ನೇರ ನೇಮಕಾತಿ: ಅರ್ಜಿ ಆಹ್ವಾನ
ಬ್ಯಾಕ್‌ಲಾಗ್ ಸಹಿತ 57 ಸಿವಿಲ್ ನ್ಯಾಯಾಧೀಶರ ಹುದ್ದೆಗೆ ನೇರ ನೇಮಕಾತಿ: ಅರ್ಜಿ ಆಹ್ವಾನ
ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 57 ಸಿವಿಲ್ ನ್ಯಾಯಾಧೀಶರ ಹುದ್ದೆಗೆ ನೇರ ನೇಮಕಾತಿ ನಡೆಸಲು ಮಾನ್ಯ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ನ್ಯಾಯಿಕ ಸೇವಾ (ನೇಮಕಾತಿ) ನಿಯಮಗಳ ಅಡಿಯಲ್ಲಿ ಮಾನ್ಯ ಕರ್ನಾಟಕ ಹೈಕೋರ್ಟ್ ಪ್ರಸ್ತುತ ಇರುವ ಹಾಗೂ ಬ್ಯಾಕ್ ಲಾಗ್ ಹುದ್ದೆಗಳೂ ಸೇರಿದಂತೆ 57 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಈ ನೇಮಕಾತಿ ನಡೆಯಲಿದೆ.
ಕನಿಷ್ಟ ವಿದ್ಯಾರ್ಹತೆ ಮತ್ತು ವಯೋಮಿತಿ
ಎ) ನೇರ ನೇಮಕಾತಿ
# ಕಾನೂನು ಪದವೀಧರರಾಗಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಮಾಡಿಕೊಂಡಿರಬೇಕು
# ಅಭ್ಯರ್ಥಿಯ ವಯಸ್ಸು 35 ಮೀರಿರಬಾರದು. (ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ)
ಬಿ. ಸೇವಾ ನಿರತ ಅಭ್ಯರ್ಥಿಗಳ ನೇಮಕಾತಿ
# ಹೈಕೋರ್ಟ್, ಜಿಲ್ಲಾ ನ್ಯಾಯಿಕ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಮತ್ತು ಪ್ರಾಸಿಕ್ಯೂಷನ್ಸ್ ಮತ್ತು ಸರ್ಕಾರಿ ವ್ಯಾಜ್ಯ ನಿರ್ವಹಣೆಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಹಾಯಕ ಸರ್ಕಾರಿ ಪ್ರಾಸಿಕ್ಯೂಟರ್‌ಗಳು ಹಾಗೂ ಹೆಚ್ಚುವರಿ ಸರ್ಕಾರಿ ನ್ಯಾಯವಾದಿಗಳು.
ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 10-04-2023
ಆನ್‌ಲೈನ್ ಮೂಲಕ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕ : 13-04-2023
ಚಲನ್ ಮೂಲಕ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕ : 13-04-2023 (ಬ್ಯಾಂಕ್ ಕೆಲಸದ ಅವಧಿಯೊಳಗೆ)
ಹೆಚ್ಚಿನ ಮಾಹಿತಿಗೆ;
https://karnatakajudiciary.kar.nic.in/recruitment.php