ವಕೀಲರು ಮುಷ್ಕರ ಮಾಡುವಂತಿಲ್ಲ; ನ್ಯಾಯಾಂಗ ಪ್ರಕ್ರಿಯೆಯಿಂದ ದೂರ ಇರುವಂತಿಲ್ಲ- ಸುಪ್ರೀಂ ಕೋರ್ಟ್ ತಾಕೀತು
ವಕೀಲರು ಮುಷ್ಕರ ಮಾಡುವಂತಿಲ್ಲ; ನ್ಯಾಯಾಂಗ ಪ್ರಕ್ರಿಯೆಯಿಂದ ದೂರ ಇರುವಂತಿಲ್ಲ- ಸುಪ್ರೀಂ ಕೋರ್ಟ್ ತಾಕೀತು
ವಕೀಲರು ಯಾವುದೇ ಕಾರಣಕ್ಕೂ ಮುಷ್ಕರ ನಡೆಸುವಂತಿಲ್ಲ ಅಥವಾ ಅವರು ತಮ್ಮ ಕರ್ತವ್ಯದಿಂದ ದೂರ ಇರುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ.
ವಕೀಲರು ಮುಷ್ಕರ ನಡೆಸಿದರೆ ಯಾ ಕರ್ತವ್ಯವನ್ನು ಬಹಿಷ್ಕರಿಸಿದರೆ ಆಗ ನ್ಯಾಯಾಂಗದ ಕೆಲಸ ಕಾರ್ಯಗಳಿಗೆ ಅಡ್ಡಿಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾ. ಎಂ.ಆರ್. ಶಾ ಹಾಗೂ ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ನ್ಯಾಯಪೀಠ ಆದೇಶ ಹೊರಡಿಸಿದ್ದು, ವಕೀಲರ ನೈಜ ತೊಂದರೆಗಳ ಪರಿಹಾರಕ್ಕಾಗಿ ರಾಜ್ಯ ಮಟ್ಟದಲ್ಲಿ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ದೂರು ಇತ್ಯರ್ಥ ಸಮಿತಿ ರಚಿಸುವಂತೆ ಹೈಕೋರ್ಟ್‌ಗಳಿಗೆ ನಿರ್ದೇಶನ ನೀಡಿದೆ.
ವಕೀಲರ ದೂರುಗಳಿಗೆ ವೇದಿಕೆ ಒದಗಿಸಲು ಜಿಲ್ಲಾ ಮಟ್ಟದಲ್ಲೂ ಸಮಿತಿ ರಚನೆಯಾಗಬೇಕು ಎಂದು ನಿರ್ದೇಶನದಲ್ಲಿ ಹೇಳಲಾಗಿದೆ.
ವಕೀಲರ ದೂರುಗಳ ಪರಿಹಾರಕ್ಕೆ ಸೂಕ್ತ ವೇದಿಕೆ ರಚಿಸಬೇಕು ಎಂದು ಕೋರಿ ಡೆಹ್ರಾಡೂನ್ ಜಿಲ್ಲಾ ವಕೀಲರ ಸಂಘ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದೆ.