ಇಬ್ಬರು ಹೆಚ್ಚುವರಿ ಅಡ್ವಕೇಟ್ ಜನರಲ್ ರಾಜೀನಾಮೆ
Monday, May 15, 2023
ಇಬ್ಬರು ಹೆಚ್ಚುವರಿ ಅಡ್ವಕೇಟ್ ಜನರಲ್ ರಾಜೀನಾಮೆ
ಹೆಚ್ಚುವರಿ ಅಡ್ವಕೇಟ್ ಜನರಲ್ ಗಳಿಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನವೇ ಎಎಜಿಗಳಿಬ್ಬರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಹೆಚ್ಚುವರಿ ಅಡ್ವಕೇಟ್ ಜನರಲ್ ಗಳಾದ ಎಂ. ಅರುಣ ಶ್ಯಾಮ್ ಮತ್ತು ಆರ್. ಸುಬ್ರಹ್ಮಣ್ಯ ಅವರು ಸೋಮವಾರ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದು, ರಾಜ್ಯಪಾಲರಾದ ಥಾವರ್ ಚಂದ್ರ ಗೆಹ್ಲೊಟ್ ಅವರಿಗೆ ಅಧಿಕೃತವಾಗಿ ತಮ್ಮ ರಾಜೀನಾಮೆ ಪತ್ರವನ್ನು ಕಳಿಸಿಕೊಟ್ಟಿದ್ದಾರೆ.
ನೂತನ ಸರ್ಕಾರ ಅಸ್ತಿತ್ವ ಬಂದ ಬಳಿಕ ಈ ಸ್ಥಾನಕ್ಕೆ ಹೊಸ ನೇಮಕಾತಿ ನಡೆಯಲಿದೆ.