ಮಾಹಿತಿ ನೀಡಲು ನಿರಾಕರಣೆ: ಮಹೇಶ್ ಜೋಷಿಗೆ ದಂಡ ವಿಧಿಸಿದ್ದ ಹೈಕೋರ್ಟ್ ಆದೇಶಕ್ಕೆ ತಡೆ
ಮಾಹಿತಿ ನೀಡಲು ನಿರಾಕರಣೆ: ಮಹೇಶ್ ಜೋಷಿಗೆ ದಂಡ ವಿಧಿಸಿದ್ದ ಹೈಕೋರ್ಟ್ ಆದೇಶಕ್ಕೆ ತಡೆ
ಸರ್ಕಾರಿ ಸ್ವಾಮ್ಯದ ಚಂದನ ವಾಹಿನಿಯ ಮುಖ್ಯಸ್ಥರಾಗಿದ್ದ ಸಂದರ್ಭದಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ ಅರ್ಜಿಗೆ ಸರಿಯಾದ ಮಾಹಿತಿ ನೀಡದ ಮಹೇಶ್ ಜೋಷಿ ಅವರಿಗೆ ಹೈಕೋರ್ಟ್ 25 ಸಾವಿರ ರೂಪಾಯಿ ದಂಡ ವಿಧಿಸಲಾಗಿತ್ತು. ಏಕಸದಸ್ಯ ನ್ಯಾಯಪೀಠ ನೀಡಿದ್ದ ಈ ದಂಡದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ.
ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಮಹೇಶ್ ಜೋಶಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ನ್ಯಾ. ಎಚ್. ಟಿ. ನರೇಂದ್ರ ಪ್ರಸಾದ್ ಮತ್ತು ಎಸ್. ರಾಚಯ್ಯ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಪ್ರಕರಣ ಏನು...?
ಸರ್ಕಾರಿ ಸ್ವಾಮ್ಯದ ಚಂದನ ದೂರದರ್ಶನ ವಾಹಿನಿಯ ಸಾರ್ವಜನಿಕ ಮಾಹಿತಿ ಅಧಿಕಾರಿಯಾಗಿ ಮಹೇಶ್ ಜೋಷಿ ಅವರಿಂದ ಮಾಹಿತಿ ಕೋರಿ ಎಸ್. ಭಜಂತ್ರಿ ಎಂಬವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯಲ್ಲಿ ಕೋರಲಾದ ಮಾಹಿತಿಯನ್ನು ನೀಡಲು ಜೋಷಿ ಅವರು ನಿರಾಕರಿಸಿದ್ದರು.
ಈ ಕುರಿತು ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿದ ಮೇಲ್ಮನವಿ ಪ್ರಾಧಿಕಾರ, ಮಾಹಿತಿ ನೀಡುವಂತೆ ಸೂಚಿಸಿತ್ತು.
ಇದನ್ನು ಪ್ರಶ್ನಿಸಿ ಜೋಷಿ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ ಮಾಹಿತಿ ಹಕ್ಕು ಕಾಯಿದೆ ಅಡಿ ಮಾಹಿತಿ ಅಧಿಕಾರಿಗೆ ಮೇಲ್ಮನವಿ ಸಲ್ಲಿಸುವ ಅಧಿಕಾರ ಇಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿ 25 ಸಾವಿರ ರೂ. ದಂಡ ವಿಧಿಸಿತ್ತು.
.