ಮಹಿಳಾ ಕುಸ್ತಿಪಟುಗಳ ಮೇಲೆ ಹಲ್ಲೆ: ಸಿಎಂ ಸಿದ್ದರಾಮಯ್ಯ ಖಂಡನೆ, ಬಿಡುಗಡೆ ಮಾಡಲು ಮೋದಿಗೆ ಆಗ್ರಹ
ಮಹಿಳಾ ಕುಸ್ತಿಪಟುಗಳ ಮೇಲೆ ಹಲ್ಲೆ: ಸಿಎಂ ಸಿದ್ದರಾಮಯ್ಯ ಖಂಡನೆ, ಬಿಡುಗಡೆ ಮಾಡಲು ಮೋದಿಗೆ ಆಗ್ರಹ
ನವದೆಹಲಿಯಲ್ಲಿ ಕುಸ್ತಿ ಒಕ್ಕೂಟದ ಅಧ್ಯಕ್ಷ ಬೃಜ್‌ಭೂಷಣ್ ಬಂಧನಕ್ಕೆ ಒತ್ತಾಯಿಸಿದ್ದ ಪ್ರತಿಭಟನಾ ನಿರತ ಮಹಿಳಾ ಕುಸ್ತಿ ಪಟುಗಳನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ.
ಕುಸ್ತಿ ಪಟುಗಳ ಪ್ರಜಾಸತ್ತಾತ್ಮಕ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ ಎಂದು ಸಿದ್ದರಾಮಯ್ಯ ಕಿಡಿಕಾರಿದ್ಧಾರೆ.
ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂದು ಸಂಭ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ನೂತನ ಪಾರ್ಲಿಮೆಂಟ್‌ನ ಕೂಗಳತೆ ದೂರದಲ್ಲಿ ನಡೆಯುತ್ತಿರುವ ಹೋರಾಟವನ್ನು ದಮನ ಮಾಡುತ್ತಿರುವುದು ಖಂಡನಾರ್ಹ ಎಂದು ಅವರು ಹೇಳಿದ್ದಾರೆ.
ರಾಷ್ಟ್ರೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬೃಜ್ ಭೂಷಣ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ದೊರಕಿಸಿಕೊಡಿ ಎಂದು ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
.