ಶಿಕ್ಷಕ, ಉಪನ್ಯಾಸಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ?- ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ!
ಶಿಕ್ಷಕ, ಉಪನ್ಯಾಸಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ?- ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ!
ಸರ್ಕಾರಿ., ಅನುದಾನಿತ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯಲ್ಲಿ ಎರಡು ವರ್ಷಗಳ ಸಡಿಲಿಕೆ ಮಾಡಲಾಗಿದೆ.
ಕೋವಿಡ್ ಕಾರಣದಿಂದ ಆರ್ಥಿಕ ಮಿತವ್ಯಯದ ನಿರ್ಬಂಧ ವಿಧಿಸಲಾಗಿತ್ತು. ಹಾಗಾಗಿ, ಈ ಹುದ್ದೆಗಳ ನೇಮಕಾತಿ ವಿಳಂಬವಾಗಿತ್ತು.
ಅನುದಾನಿತ ಸಂಸ್ಥೆಗಳಲ್ಲಿ ಅನುದಾನರಹಿತ ಹುದ್ದೆಗಳನ್ನು 'ವೇತನ ಅನುದಾನ'ಕ್ಕೆ ಒಳಪಡಿಸಲು ಸಾಧ್ಯವಾಗಿರಲಿಲ್ಲ. ಹೆಚ್ಚಿನ ಪ್ರಕರಣಗಳಲ್ಲಿ ಆಕಾಂಕ್ಷಿಗಳ ವಯೋಮಿತಿ ಮೀರುತ್ತಿದೆ. ಈ ಎಲ್ಲ ಕಾರಣಗಳಿಂದ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
ಈ ನಿಯಮ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ 788 ಹುದ್ದೆಗಳ ಭರ್ತಿಗೂ ಅನ್ವಯಿಸುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸ್ಪಷ್ಟಪಡಿಸಿದೆ.
ಆದರೆ, ನೇಮಕಾತಿಯಲ್ಲಿನ 2 ವರ್ಷ ವಯೋಮಿತಿ ಸಡಿಲಿಕೆ ಸೀಮಿತ ಅವಧಿ ಮತ್ತು ನೇಮಕಾತಿಗೆ ಒಳಪಟ್ಟಿದೆ. ವಯೋಮಿತಿ ಸಡಿಲಿಕೆ ಅವಕಾಶವನ್ನು 2022ರ ಜೂನ್ 23ರಿಂದ ಒಂದು ವರ್ಷದ ಅವಧಿಗೆ ಅನ್ವಯಿಸಿ ಮಿತಿಗೊಳಿಸಿರುವುದರಿಂದ ಇನ್ನು 15 ದಿನದೊಳಗೆ ಅಧಿಸೂಚನೆ ಹೊರಡಿಸುವ ನೇಮಕಾತಿಗಳಿಗೆ ಮಾತ್ರ ಅನ್ವಯವಾಗುತ್ತದೆ.