ಅಕ್ಕಿ ರಾಜಕೀಯ: ಅನ್ನಭಾಗ್ಯ ಜಾರಿ ಮಾಡಿಯೇ ಸಿದ್ಧ ಎಂದ ಕಾಂಗ್ರೆಸ್‌ನ ಆ 7 ಪ್ರಶ್ನೆಗಳು..!
ಅಕ್ಕಿ ರಾಜಕೀಯ: ಅನ್ನಭಾಗ್ಯ ಜಾರಿ ಮಾಡಿಯೇ ಸಿದ್ಧ ಎಂದ ಕಾಂಗ್ರೆಸ್‌ನ ಆ 7 ಪ್ರಶ್ನೆಗಳು..!
ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ಕರ್ನಾಟಕದ ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಮಾರಾಟ ಸ್ಥಗಿತಗೊಳಿಸಿದೆ ಎಂದು ಕಾಂಗ್ರೆಸ್ ದೂರಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಬಡವರ ವಿರೋಧಿ ಹಾಗೂ ದ್ವೇಷಪೂರಿತ ನಿಲುವು ಬಹಿರಂಗಗೊಂಡಿದೆ ಎಂದು ಅದು ಅಕ್ರೋಶ ವ್ಯಕ್ತಪಡಿಸಿದೆ.
ಆಹಾರ ನಿಗಮದಲ್ಲಿ ಸಾಕಷ್ಟು ಹಾಗೂ ಹೆಚ್ಚುವರಿ ಅಕ್ಕಿ ದಾಸ್ತಾನು ಇದೆ. ಆದರೂ ನಿಗಮವು ಮುಕ್ತ ಮಾರುಕಟ್ಟೆಯಲ್ಲಿ ದೊಡ್ಡ ವ್ಯಾಪಾರಿಗಳಿಗೆ ಅಕ್ಕಿ ಮಾರಾಟ ಮಾಡಲು ಮುಂದಾಗಿದೆ. ಆದರೆ, ಕರ್ನಾಟಕಕ್ಕೆ ಅಕ್ಕಿ ನೀಡಲು ಸಿದ್ಧವಿಲ್ಲ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.
ಬಿಜೆಪಿ ಸರ್ಕಾರ ಎಷ್ಟೇ ಅಡ್ಡಿಪಡಿಸಿದರೂ ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿಯೇ ಸಿದ್ಧ. ಕೇಂದ್ರದ ಬಡವರ ವಿರೋಧಿ ನೀತಿಯನ್ನು ಕನ್ನಡಿಗರು ಕ್ಷಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಂಡ ಕಾರಿದರು.
ಕರ್ನಾಟಕದಲ್ಲಿ ಬಿಜೆಪಿಯ ದಯನೀಯ ಸೋಲಿನಿಂದ ಪ್ರಧಾನಿ ನರೇಂದ್ರ ಮೋದಿ ಹತಾಶೆಗೊಂಡಿದ್ದಾರೆ. ಅಕ್ಕಿಯನ್ನು ರಾಜ್ಯಕ್ಕೆ ಮಾರಾಟ ಮಾಡದಂತೆ ನಿರ್ದೇಶನ ನೀಡುವ ಮೂಲಕ ಸಮಾಜದ ಕಟ್ಟಕಡೆಯ ವರ್ಗಗಳಿಗೆ ಅವರು ಅನ್ಯಾಯ ಮಾಡಿದ್ದಾರೆ ಎಂದು ಅವರು ದೂರಿದರು.
ಕಾಂಗ್ರೆಸ್ ಮುಂದಿಟ್ಟ 5 ಪ್ರಶ್ನೆಗಳು:
1) ರಾಜ್ಯದಲ್ಲಿ ಬಿಜೆಪಿ ಸೋಲಿನಿಂದಾಗಿ ಜನರಿಗೆ ಅನ್ನ ನಿರಾಕರಿಸುವಷ್ಟರ ಮಟ್ಟಿಗೆ ಬಿಜೆಪಿ ಮತ್ತು ಪ್ರಧಾನಿ ಮೋದಿ ಕುರುಡರಾಗಿದ್ದಾರಾ..?
2) ಬಿಜೆಪಿ ಮತ್ತು ಮೋದಿ ಸರ್ಕಾರದ ಬೆಂಬಲ ಇರುವ ದೊಡ್ಡ ವ್ಯಾಪಾರಿಗಳ ಕೂಟ ಬಡವರ ಅಕ್ಕಿ ಕಸಿಯಲು ಮುಂದಾಗಿದೆಯೇ..?
3) ಬಡವರ ವಿರೋಧಿ ಈ ನೀತಿ ಬಗ್ಗೆ ಬಿಜೆಪಿಯ ಬಿ ಟೀಮ್ ಆಗಿರುವ ಜೆಡಿಎಸ್ ಏಕೆ ಮೌನವಾಗಿದೆ..?
4) ಕರ್ನಾಟಕ ರಾಜ್ಯದ ಸಂಸದರು, ಕೇಂದ್ರದ ಮಂತ್ರಿಗಳು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಕಂಡು ಮೌನವಾಗಿರುವುದೇಕೆ..? ಇಷ್ಟಾದರೂ ಅವರು ಸಂಸದ ಹಾಘೂ ಸಚಿವ ಸ್ಥಾನದಲ್ಲಿ ಒಂದು ದಿನ ಮುಂದುವರಿಯಲು ಯೋಗ್ಯರೇ..?
5) ಅಕ್ಕಿ ನಿರಾಕರಿಸಿರುವ ವಿಚಾರದಲ್ಲಿ ರಾಜ್ಯ ಬಿಜೆಪಿ ನಾಯಕರು ಬಾಯಿಗೆ ಬೀಗ ಹಾಕಿಕೊಂಡಿರುವುದೇಕೆ..?