ಒಪಿಎಸ್ ಜಾರಿಯಾಗುತ್ತದೆಯೇ..? : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು..?
ಒಪಿಎಸ್ ಜಾರಿಯಾಗುತ್ತದೆಯೇ..? : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು..?
ಹಳೆ ಪಿಂಚಣಿ ಯೋಜನೆ (ಒಪಿಎಸ್) ನ್ನು ಕರ್ನಾಟಕದಲ್ಲಿ ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸಿ, ಬಜೆಟ್‌ನಲ್ಲಿ ಘೋಷಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಇತರ ಸಂಘಟನೆಗಳ ನಾಯಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನಕ್ಕೆ ತರುವಂತೆ ಮನವಿ ಮಾಡಿತು. ಮನವಿ ಸ್ವೀಕರಿಸಿದ ಬಳಿಕ ಸಿಎಂ ಈ ಹೇಳಿಕೆ ನೀಡಿದ್ದಾರೆ.
ರಾಜಸ್ತಾನ, ಛತ್ತೀಸ್ ಘಡದಲ್ಲಿ ಎನ್‌ಪಿಎಸ್ ರದ್ದಾಗಿದೆ. ಕರ್ನಾಟಕದಲ್ಲೂ ರದ್ದಾಗಬೇಕು. ಎನ್‌ಪಿಎಸ್ ರದ್ದು ಮಾಡುವುದರಿಂದ ಯೋಜನೆಗೆ ಲಭ್ಯವಿರುವ ಒಟ್ಟು 19 ಸಾವಿರ ಕೋಟಿ ರೂ.ಗಳು ಅಭಿವೃದ್ಧಿ ಕಾರ್ಯಕ್ರಮಗಳಿಗೆ ದೊರೆಯಲಿದೆ. ನೌಕರರ ಪಾಲಿನ 9 ಸಾವಿರ ಕೋಟಿ ರೂ. ಜಿ.ಪಿಎಫ್. ಆಗಿ ಪರಿವರ್ತನೆ ಮಾಡಿಕೊಳ್ಳಬಹುದು ಎಂದು ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ತೇಜ ವಿವರ ನೀಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಕೆಪಿಟಿಸಿಎಲ್, ಆರೋಗ್ಯ, ಜಲಮಂಡಳಿ, ಕಂದಾಯ ಇಲಾಖೆ ನೌಕರರ ಸಂಘಗಳು ಹಾಗೂ ಇತರ ವಿವಿಧ ಸಂಘಟನೆಗಳ ಪದಾಧಿಕಾರಿಗಳು ನಿಯೋಗದಲ್ಲಿ ಇದ್ದು, ಒಪಿಎಸ್‌ಗೆ ಒತ್ತಾಯ ಮಾಡಿದ್ದರು.
.