ವಿಶೇಷ ಡಿಜಿಪಿಯಿಂದ ಪೊಲೀಸ್ ವರಿಷ್ಠಾಧಿಕಾರಿಗೆ ಲೈಂಗಿಕ ಕಿರುಕುಳ: 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ವಿಶೇಷ ಡಿಜಿಪಿಯಿಂದ ಪೊಲೀಸ್ ವರಿಷ್ಠಾಧಿಕಾರಿಗೆ ಲೈಂಗಿಕ ಕಿರುಕುಳ: 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.
ಹಿರಿಯ ಐಪಿಎಸ್ ಅಧಿಕಾರಿಗೆ ಶಿಕ್ಷೆ ವಿಧಿಸಿ ತಮಿಳುನಾಡಿನ ವಿಲ್ಲುಪುರದ ಪ್ರಧಾನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ಹೊರಡಿಸಿದೆ. ರಾಜೇಶ್ ದಾಸ್ ಅವರು ಶಿಕ್ಷೆಗೆ ಗುರಿಯಾಗಿರುವ ಪೊಲೀಸ್ ಅಧಿಕಾರಿಯಾಗಿದ್ದಾರೆ. ಅವರಿಗೆ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ.
2021ರಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ವಿಶೇಷ ಡಿಜಿಪಿಯಾಗಿದ್ದಾಗ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದರು. ಈ ಬಗ್ಗೆ ಸಂತ್ರಸ್ತ ಮಹಿಳಾ ಪೊಲೀಸ್ ಅಧಿಕಾರಿ ದೂರು ನೀಡಿದ್ದರು.
ಸದ್ರಿ ಈ ದೂರು ದಾಖಲಾದ ಹಿನ್ನೆಲೆಯಲ್ಲಿ ಆರೋಪಿ ವಿಶೇಷ ಡಿಜಿಪಿ ರಾಜೇಶ್ ದಾಸ್ ಅವರಿಗೆ ತಕ್ಷಣವೇ ಹಿಂಬಡ್ತಿ ನೀಡಿ ಅಮಾನತು ಮಾಡಲಾಗಿತ್ತು.