ಧರ್ಮಸ್ಥಳ, ಹೆಗ್ಗಡೆ ವಿರುದ್ಧ ಅವಹೇಳನ ಸುದ್ದಿಗೆ ನಿರ್ಬಂಧ: ಹೈಕೋರ್ಟ್ ತಾತ್ಕಾಲಿಕ ಪ್ರತಿಬಂಧಕಾಜ್ಞೆ
ಧರ್ಮಸ್ಥಳ, ಹೆಗ್ಗಡೆ ವಿರುದ್ಧ ಅವಹೇಳನ ಸುದ್ದಿಗೆ ನಿರ್ಬಂಧ: ಹೈಕೋರ್ಟ್ ತಾತ್ಕಾಲಿಕ ಪ್ರತಿಬಂಧಕಾಜ್ಞೆ
ಧರ್ಮಸ್ಥಳ ಮತ್ತು ಅಲ್ಲಿನ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ, ಕೆಲ ವ್ಯಕ್ತಿಗಳು ಮತ್ತು ಮಾಧ್ಯಮದ ವಿರುದ್ಧ ತಾತ್ಕಾಲಿಕ ಪ್ರತಿಬಂಧಕಾಜ್ಞೆ ಹೊರಡಿಸಿದೆ.
ಬೆಂಗಳೂರಿನ 11ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಪಿ. ಕುಮಾರಸ್ವಾಮಿ ಈ ಆದೇಶ ಹೊರಡಿಸಿದ್ದು, 61 ಪ್ರತಿವಾದಿಗಳಿಗೂ ನೋಟೀಸ್ ಜಾರಿಗೊಳಿಸಿದೆ.
ಈಗಾಗಲೇ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಸುದ್ದಿ, ವಿಶ್ಲೇಷಣೆ ಅಥವಾ ಪ್ರಸಾರ ಮಾಡಿದ್ದರೆ ಅದನ್ನು ತಕ್ಷಣ ತೆಗೆದುಹಾಕುವಂತೆ ನ್ಯಾಯಪೀಠ ತನ್ನ ಆದೇಶದಲ್ಲಿ ಹೇಳಿದೆ.
ಮಹೇಶ್ ಶೆಟ್ಟಿ ತಿಮರೋಡಿ, ಜಗದೀಶ್, ಪ್ರಭಾ ಬೆಳವಂಗಲ, ಸೋಮನಾಥ ನಾಯಕ್, ಬಿ.ಎಂ. ಭಟ್, ವಿಠಲ ಗೌಡ ಮತ್ತಿತರರು ವಿನಾ ಕಾರಣ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಈ ಸಂಬಂಧ ಕೆಲವು ಮಾಧ್ಯಮಗಳು ಧರ್ಮಸ್ಥಳ ಮತ್ತು ಹೆಗ್ಗಡೆ ಕುಟುಂಬಸ್ಥರ ವಿರುದ್ಧ ಅವಹೇಳನಕಾರಿ ವರದಿ ಮಾಡುತ್ತಿವೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.
ಧರ್ಮಸ್ಥಳ, ವೀರೇಂದ್ರ ಹೆಗ್ಗಡೆ ಮತ್ತು ಅವರು ನಡೆಸುತ್ತಿರುವ ಸಂಸ್ಥೆಗಳ ವಿರುದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸ್ಯಾಪ್, ಫೇಸ್ ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್, ವಿದ್ಯುನ್ಮಾನ ಮಾಧ್ಯಮ ಹಾಗೂ ಇತರ ಯಾವುದೇ ಮಾಧ್ಯಮಗಳಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಅವಹೇಳನಕಾರಿ ವರದಿ ಮಾಡಬಾರದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ನಿರ್ದೇಶಿಸಿದೆ.