ಮಹಿಳೆ ಜೊತೆ ಅಸಭ್ಯ ವರ್ತನೆ: ಆರೋಪಿಗೆ ಶಿಕ್ಷೆ ವಿಧಿಸಿದ ಮಂಗಳೂರು ಜೆಎಂಎಫ್‌ಸಿ ನ್ಯಾಯಾಲಯ
ಮಹಿಳೆ ಜೊತೆ ಅಸಭ್ಯ ವರ್ತನೆ: ಆರೋಪಿಗೆ ಶಿಕ್ಷೆ ವಿಧಿಸಿದ ಮಂಗಳೂರು ಜೆಎಂಎಫ್‌ಸಿ ನ್ಯಾಯಾಲಯ
ಮಹಿಳೆಯ ಜೊತೆಗೆ ಅಶ್ಲೀಲವಾಗಿ ವರ್ತಿಸಿದ ಪ್ರಕರಣದ ಆರೋಪಿಗೆ ಮಂಗಳೂರು ಮೂರನೇ ಜೆಎಂಎಫ್‌ಸಿ ನ್ಯಾಯಾಲಯವು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ತಲಪಾಡಿಯ ಮೊಹಮ್ಮದ್ ಮುಸ್ತಾಫ ಮಂಗಳೂರಿನ ನ್ಯಾಯಾಲಯದಿಂದ ಶಿಕ್ಷೆ ಹಾಗೂ ದಂಡನೆಗೆ ಗುರಿಯಾದ ಅಪರಾಧಿಯಾಗಿದ್ದಾನೆ.
ಮಂಗಳೂರಿನ ಲೇಡಿಹಿಲ್ ವೃತ್ತದ ಬಳಿ 2017ರ ಜೂನ್ ನಲ್ಲಿ ಮೊಹಮ್ಮದ್ ಮುಸ್ತಾಫ ಎಂಬಾತ ಮಹಿಳೆಯ ಘನತೆಗೆ ಕುಂದು ಉಂಟು ಮಾಡುವ ಉದ್ದೇಶದಿಂದ ಅಶ್ಲೀಲವಾಗಿ ವರ್ತಿಸಿದ್ದ.
ಈ ಪ್ರಕರಣದ ವಿಚಾರಣೆ ನಡೆಸಿದ 3ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ತಾರಾ ಕೆ.ಸಿ. ಅವರು ಪ್ರಾಸಿಕ್ಯೂಷನ್ ಪರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ನಾಲ್ಕು ತಿಂಗಳ ಜೈಲು ವಾಸ ಹಾಗೂ 2500/- ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರಿ ಅಭಿಯೋಜಕಿ ನೇತ್ರಾವತಿ ಅವರು ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ್ದರು. ಉರ್ವ ಪೊಲೀಸ್ ಠಾಣೆಯ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದರು.