SC/ST PTCL (Amendment) Act 2023: ಹೊಸ ಮಸೂದೆಯ ವಿಶೇಷತೆಗಳೇನು..?
SC/ST PTCL (Amendment) Act 2023: ಹೊಸ ಮಸೂದೆಯ ವಿಶೇಷತೆಗಳೇನು..?
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಮೀನು ಪರಭಾರೆ ನಿಷೇಧ (ತಿದ್ದುಪಡಿ) ಮಸೂದೆಗೆ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಪರಿಶಿಷ್ಟ ಜಾತಿ ಯಾ ಪಂಗಡದ ಸಮುದಾಯಕ್ಕೆ ಮಂಜೂರಾದ ಜಮೀನಿನ ರಕ್ಷಣೆಗಾಗಿ ಈ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಲಾಗಿದ್ದು, ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.
ಮಸೂದೆಯ ಪ್ರಮುಖ ಅಂಶಗಳು:
ಪರಿಶಿಷ್ಟರ ಭೂಮಿ ಅಕ್ರಮ ಪರಭಾರೆ ಪ್ರಶ್ನಿಸಿ ನ್ಯಾಯಾಲಯದಲ್ಲಿ ಮನವಿ ಸಲ್ಲಿಸುವುದಕ್ಕೆ ಹಿಂದೆ ವಿಧಿಸಿದ್ದ ಕಾಲಮಿತಿಯನ್ನು ರದ್ದುಪಡಿಸಲಾಗಿದೆ.
ಈ ಹಿಂದೆ, ಪರಿಶಿಷ್ಟ ಸಮುದಾಯದವರಿಗೆ ಸರ್ಕಾರ ಮಂಜೂರು ಮಾಡಿದ ಜಮೀನನ್ನು ಅನುಮತಿ ಇಲ್ಲದೆ ಮಾರಾಟ ಮಾಡುವುದಕ್ಕೆ ಹಾಲಿ ಪಿಟಿಸಿಎಲ್ ಕಾಯ್ದೆಯಲ್ಲಿ ನಿರ್ಬಂಧ ಇತ್ತು. ಅದೇ ರೀತಿ, ಅಕ್ರಮ ಪರಭಾರೆ ಪ್ರಶ್ನಿಸಿ, ವಾರಿಸುದಾರರು ಅರ್ಜಿ ಸಲ್ಲಿಸುವುದಕ್ಕೆ ಪಿಟಿಸಿಎಲ್ ಕಾಯ್ದೆಯಲ್ಲಿ ಕಾಲಮಿತಿ ನಿಗದಿಪಡಿಸಿರಲಿಲ್ಲ.
ಕಾಲಮಿತಿ ನಿಗದಿಪಡಿಸದಿದ್ದರೆ ಅರ್ಜಿಗಳು ಮಾನ್ಯವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಹಾಗಾಗಿ ಕಾಯ್ದೆ ಬಲ ಕಳೆದುಕೊಂಡಿತ್ತು.
ಪರಿಶಿಷ್ಟರಿಗೆ ನ್ಯಾಯ ಒದಗಿಸುವುದಕ್ಕಾಗಿ ತಿದ್ದುಪಡಿ ಮಸೂದೆಯನ್ನು ಸಂಪುಟದ ಒಪ್ಪಿಗೆ ಪಡೆದು, ಸದನದಲ್ಲಿ ಮಂಡಿಸಲಾಗಿದೆ.