ಸುಪ್ರೀಂ ಕೋರ್ಟ್ ಕದ ತಟ್ಟಿದ ರಾಹುಲ್ ಗಾಂಧಿ: ಎಲ್ಲರ ಚಿತ್ತ ಸರ್ವೋಚ್ಚ ಪೀಠದತ್ತ..!
ಸುಪ್ರೀಂ ಕೋರ್ಟ್ ಕದ ತಟ್ಟಿದ ರಾಹುಲ್ ಗಾಂಧಿ: ಎಲ್ಲರ ಚಿತ್ತ ಸರ್ವೋಚ್ಚ ಪೀಠದತ್ತ..!
'ಎಲ್ಲ ಕಳ್ಳರಿಗೂ ಮೋದಿ ಉಪನಾಮ ಏಕೆ ಇದೆ' ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ನೀಡಿದ್ದ ಹೇಳಿಕೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ಶಿಕ್ಷೆಗೆ ತಡೆ ನೀಡುವುದು ನಿಯಮವಲ್ಲ. ಅದನ್ನು ಅಪರೂಪದ ಪ್ರಕರಣಗಳಲ್ಲಿ ಪ್ರಯೋಗಿಸಬೇಕು ಎಂದು ಗುಜರಾತ್ ಹೈಕೋರ್ಟ್‌ನ ಹೇಮಂತ್ ಪ್ರಚ್ಛಕ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಜುಲೈ 7ರಂದು ಆದೇಶ ನೀಡಿತ್ತು.
ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆದು ಆರೋಪಿ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.
2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಕೋಲಾರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಎಲ್ಲ ಕಳ್ಳರಿಗೂ ಮೋದಿ ಉಪನಾಮ ಏಕಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿರುದ್ಧ ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಸಿದ ಸೂರತ್ ನ್ಯಾಯಾಲಯ ರಾಹುಲ್‌ಗೆ 2 ವರ್ಷ ಜೈಲು ಶಿಕ್ಷೆ ನೀಡಿದ್ದು, ಇದನ್ನು ಪ್ರಶ್ನಿಸಿ ರಾಹುಲ್ ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದರು.
ಪ್ರಕರಣ: ರಾಹುಲ್ ಗಾಂಧಿ Vs ಪೂರ್ಣೇಶ್ ಗಾಂಧಿ (ಸುಪ್ರೀಂ ಕೋರ್ಟ್)