-->
ಎಪಿಪಿ ಹುದ್ದೆ ನೇಮಕಾತಿಗೆ ತಡೆಯಾಜ್ಞೆ- ಯಥಾಸ್ಥಿತಿ ಕಾಪಾಡಲು ಹೈಕೋರ್ಟ್ ಸೂಚನೆ

ಎಪಿಪಿ ಹುದ್ದೆ ನೇಮಕಾತಿಗೆ ತಡೆಯಾಜ್ಞೆ- ಯಥಾಸ್ಥಿತಿ ಕಾಪಾಡಲು ಹೈಕೋರ್ಟ್ ಸೂಚನೆ

ಎಪಿಪಿ ಹುದ್ದೆ ನೇಮಕಾತಿಗೆ ತಡೆಯಾಜ್ಞೆ- ಯಥಾಸ್ಥಿತಿ ಕಾಪಾಡಲು ಹೈಕೋರ್ಟ್ ಸೂಚನೆ





ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಯ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.


ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿತ್ತು.


ಈ ಬಗ್ಗೆ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ದಿನಾಂಕ 31-07-2023ರಂದು ಸರ್ಕಾರಿ ಆದೇಶವನ್ನು ಹೊರಡಿಸಿತ್ತು.


ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನ ಬೆಂಗಳೂರು ಪೀಠಕ್ಕೆ ಮತ್ತು ಕಲ್ಬುರ್ಗಿ ಪೀಠಕ್ಕೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ನ್ಯಾಯಪೀಠ ಸದರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ತಡೆಯಾಜ್ಞೆ ನೀಡಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆದೇಶದ ವರೆಗೆ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ.



ಈ ಹಿನ್ನೆಲೆಯಲ್ಲಿ ಸದ್ಯ ನೇಮಕಾತಿ ಪ್ರಕ್ರಿಯೆಯನ್ನು ಯಥಾಸ್ಥಿತಿ ಕಾಪಾಡುವಂತೆ ನಿರ್ದೇಶನ ಇರುವ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಜಿ. ಶ್ಯಾಮ ಹೊಳ್ಳ ಅವರು ತಿಳಿಸಿದ್ದಾರೆ.


Ads on article

Advertise in articles 1

advertising articles 2

Advertise under the article