ಕರ್ನಾಟಕ ಹೈಕೋರ್ಟ್ ಇಬ್ಬರು ನ್ಯಾಯಮೂರ್ತಿಗಳ ಖಾಯಂ ನೇಮಕಾತಿಗೆ ಕೊಲೀಜಿಯಂ ಶಿಫಾರಸ್ಸು
Thursday, August 31, 2023
ಕರ್ನಾಟಕ ಹೈಕೋರ್ಟ್ ಇಬ್ಬರು ನ್ಯಾಯಮೂರ್ತಿಗಳ ಖಾಯಂ ನೇಮಕಾತಿಗೆ ಕೊಲೀಜಿಯಂ ಶಿಫಾರಸ್ಸು
ಕರ್ನಾಟಕ ಹೈಕೋರ್ಟ್ ಇಬ್ಬರು ನ್ಯಾಯಮೂರ್ತಿಗಳ ನೇಮಕಾತಿಯನ್ನು ಖಾಯಂಗೊಳಿಸುವಂತೆ ಕೊಲೀಜಿಯಂ ಶಿಫಾರಸ್ಸು ಮಾಡಿದೆ.
ನ್ಯಾ. ಅನಂತ ರಾಮನಾಥ ಹೆಗಡೆ ಮತ್ತು ಕೆ.ಎಸ್. ಹೇಮಲೇಖಾ ಅವರನ್ನು ಕಾಯಂ ನ್ಯಾಯಮೂರ್ತಿಗಳನ್ನಾಗಿ ನೇಮಿಸುವಂತೆ ಶಿಫಾರಸ್ಸಿನಲ್ಲಿ ಕೋರಲಾಗಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅಧ್ಯಕ್ಷತೆಯ ಕೊಲೀಜಿಯಂ ಈ ಶಿಫಾರಸ್ಸು ಮಾಡಿದೆ.
ಹೆಚ್ಚುವರಿ ನ್ಯಾಯಮೂರ್ತಿ ಸಿದ್ದಯ್ಯ ರಾಚಯ್ಯ ಅವರನ್ನು ಮತ್ತೆ ಒಂದು ವರ್ಷದ ಅವಧಿಗೆ ಅದೇ ಹುದ್ದೆಯಲ್ಲಿ ಹೊಸದಾಗಿ ನೇಮಕ ಮಾಡಬಹುದು ಎಂದು ತಿಳಿಸಿದೆ.
ಮೇ ತಿಂಗಳಿನಲ್ಲಿ ಈ ಮೂವರನ್ನು ಖಾಯಂ ನ್ಯಾಯಮೂರ್ತಿಗಳನ್ನಾಗಿ ನೇಮಿಸುವಂತೆ ಕೊಲೀಜಿಯಂ ಶಿಫಾರಸ್ಸು ಮಾಡಿತ್ತು. ಇದಕ್ಕೆ ಮುಖ್ಯಮಂತ್ರಿ ಮತ್ತು ರಾಜ್ಯಪಾಲರು ಅನುಮೋದನೆ ನೀಡಿದ್ದರು.