ಸೌಜನ್ಯ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿರುವ ಹೆಗ್ಗಡೆ, ಧರ್ಮಸ್ಥಳ ಅರ್ಜಿದಾರರು ಕೋರಿರುವುದೇನು..?
ಸೌಜನ್ಯ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿರುವ ಹೆಗ್ಗಡೆ, ಧರ್ಮಸ್ಥಳ ಅರ್ಜಿದಾರರು ಕೋರಿರುವುದೇನು..?
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗೆಡೆ ಮತ್ತು ಅವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಕರ್ನಾಟಕ ಹೈಕೋರ್ಟ್‌ನಲ್ಲಿ ಮತ್ತೊಂದು ಅರ್ಜಿ ಸಲ್ಲಿಕೆ ಆಗಿದೆ.
ಈ ಮೂವರು ಪಕ್ಷಕಾರರ ವಿರುದ್ಧ ಯಾರೂ ಅವಹೇಳನಕಾರಿ ಹೇಳಿಕೆ ನೀಡಬಾರದು ಮತ್ತು ಈ ಬಗ್ಗೆ ಅಧೀನ ನ್ಯಾಯಾಲಯ ನೀಡಿರು ಆದೇಶವನ್ನು ಉಲ್ಲಂಘಿಸಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಈ ಅರ್ಜಿಯಲ್ಲಿ ಕೋರಲಾಗಿದೆ.
ಇದಕ್ಕಿಂತಲೂ ಮಹತ್ವದ್ದೆಂದರೆ, ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ತನಿಖೆಯನ್ನಾದರೂ ನಡೆಸಲು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಈ ಅರ್ಜಿಯಲ್ಲಿ ಕೋರಲಾಗಿದೆ.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಮತ್ತು ವೀರೇಂದ್ರ ಹೆಗ್ಗಡೆ ಅವರ ಸಹೋದರನ ಅಳಿಯ ನಂದೀಶ್ ಕುಮಾರ್ ಜೈನ್ ಅವರು ಈ ಅರ್ಜಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಸಲ್ಲಿಸಿದ್ದಾರೆ.
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಭಾರತೀಯ ನ್ಯಾಯಾಂಗದ ವ್ಯವಸ್ಥೆ ವಿರುದ್ಧವೂ ಆಕ್ಷೇಪಾರ್ಹ ಮಾತುಗಳನ್ನು ಆಡುವ ಮೂಲಕ ನ್ಯಾಯಾಂಗಕ್ಕೆ ಅಗೌರವ ತೋರಿದ್ದಾರೆ.