25 ನ್ಯಾಯಮೂರ್ತಿಗಳ ವರ್ಗಾವಣೆ ಲಿಸ್ಟ್: ಸುಪ್ರೀಂ ಕೋರ್ಟ್ ಕೊಲೀಜಿಯಂ ನಿರ್ಧಾರ
25 ನ್ಯಾಯಮೂರ್ತಿಗಳ ವರ್ಗಾವಣೆ ಲಿಸ್ಟ್: ಸುಪ್ರೀಂ ಕೋರ್ಟ್ ಕೊಲೀಜಿಯಂ ನಿರ್ಧಾರ
ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ 25 ಮಂದಿ ನ್ಯಾಯಮೂರ್ತಿಗಳ ವರ್ಗಾವಣೆಯ ಪಟ್ಟಿಯನ್ನು ಸುಪ್ರೀಂ ಕೋರ್ಟ್ ಕೊಲೀಜಿಯಂ ತಯಾರಿಸಿದ್ದು, ಈ ನಿರ್ಧಾರದ ಬಗ್ಗೆ ಶಿಫಾರಸ್ಸು ಮಾಡಲು ಕೊಲೀಜಿಯಂ ಮುಂದಾಗಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಧನಂಜಯ ವೈ. ಚಂದ್ರಚೂಡ್ ಅವರ ನೇತೃತ್ವದ ಕೊಲೀಜಿಯಂ ಹೈಕೋರ್ಟ್ ನ್ಯಾಯಮೂರ್ತಿಗಳ ಹುದ್ದೆಯ ಪುನಾರಚನೆಗೆ ಚಾಲನೆ ನೀಡಿದೆ. ನ್ಯಾ. ಸಂಜಯ್ ಕಿಶನ್ ಕೌಲ್, ನ್ಯಾ. ಸಂಜೀವ್ ಖನ್ನಾ, ನ್ಯಾ. ಬಿ.ಆರ್. ಗವಾಯಿ ಹಾಗೂ ನ್ಯಾ. ಸೂರ್ಯಕಾಂತ್ ಅವರು ಕೊಲೀಜಿಯಂ ಸದಸ್ಯ ನ್ಯಾಯಮೂರ್ತಿಗಳಾಗಿದ್ದಾರೆ.
25 ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡುವ ನಿರ್ಧಾರವನ್ನು ಬಹುತೇಕ ಅಂತಿಮಗೊಳಿಸಿದ್ದು, ನ್ಯಾಯಮೂರ್ತಿಗಳು ಬೇರೆ ಹೈಕೋರ್ಟ್‌ಗೆ ವರ್ಗಾವಣೆ ಹೊಂದಲು ಮನವಿ ಮಾಡಿದರೆ, ಅಥವಾ ವರ್ಗಾವಣೆ ಮಾಡಲೇ ಬಾರದು ಎಂದು ತಿಳಿಸಿದರೆ ಮಾತ್ರ ಕೊಲೀಜಿಯಂ ತನ್ನ ನಿರ್ಧಾರವನ್ನು ತಿದ್ದುಪಡಿ ಮಾಡಿ ಬದಲಾಯಿಸಬಹುದು ಎನ್ನಲಾಗಿದೆ.
ಈ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟಿನ ನಾಗ್ಪುರ ಪೀಠದ ನ್ಯಾಯಮೂರ್ತಿ ರೋಹಿತ್ ಬಿ. ದೇವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.