ಶೀಘ್ರದಲ್ಲೇ 49 ಸಹಾಯಕ ಸರ್ಕಾರಿ ಅಭಿಯೋಜಕರ ನೇಮಕಾತಿ- ಹೈಕೋರ್ಟ್‌ಗೆ ಲಿಖಿತ ಮಾಹಿತಿ ನೀಡಿದ ಸರ್ಕಾರ
ಶೀಘ್ರದಲ್ಲೇ 49 ಸಹಾಯಕ ಸರ್ಕಾರಿ ಅಭಿಯೋಜಕರ ನೇಮಕಾತಿ- ಹೈಕೋರ್ಟ್‌ಗೆ ಲಿಖಿತ ಮಾಹಿತಿ ನೀಡಿದ ಸರ್ಕಾರ
49 ಸಹಾಯಕ ಸರ್ಕಾರಿ ಅಭಿಯೋಜಕರಿಗೆ ಹಿರಿಯ ಸರ್ಕಾರಿ ಅಭಿಯೋಜಕರ ಹುದ್ದೆಗೆ ಪದೋನ್ನತಿ ನೀಡಲಾಗಿದೆ. ಈ ಪ್ರಕ್ರಿಯೆಯಿಂದ ಖಾಲಿಯಾಗಿರುವ ಹುದ್ದೆಯನ್ನು ತುಂಬಲು ಸರ್ಕಾರ ಶೀಘ್ರವೇ ನೇಮಕಾತಿ ಪ್ರಕ್ರಿಯೆ ನಡೆಸಲಿದೆ.
ಸರ್ಕಾರ ಈ ವಿಷಯವನ್ನು ಅಧಿಕೃತವಾಗಿ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದು, ಈ ಬಗ್ಗೆ ಲಿಖಿತ ಜ್ಞಾಪನ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಲಾಗಿದೆ.
ಈಗ ಖಾಲಿ ಇರುವ 49 ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಲು ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠಕ್ಕೆ ಈ ಮಾಹಿತಿ ನೀಡಲಾಗಿದೆ.
ಈ ಬಗ್ಗೆ ಗೃಹ ಇಲಾಖೆಯ ಅಧೀನ ಕಾರ್ಯದರ್ಶಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಈ ಬಗ್ಗೆ ಅಂತಿಮವಾಗಿ ಕ್ರಮ ಕೈಗೊಂಡ ವರದಿಯನ್ನು ಮೂರು ವಾರಗಳ ಬಳಿಕ ನ್ಯಾಯಪೀಠಕ್ಕೆ ಸಲ್ಲಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಒಟ್ಟು 143 ಸಹಾಯಕ ಸರ್ಕಾರಿ ಅಭಿಯೋಜಕರ ಪೈಕಿ ಸೆಪ್ಟಂಬರ್ 15ರಂದು 132 ಮಂದಿಗೆ ಅಭಿಯೋಜನಾ ಇಲಾಖೆಯು ನೇಮಕಾತಿ ಆದೇಶವನ್ನು ನೀಡಿದೆ. ಇದೇ ವೇಳೆ, 49 ಮಂದಿಗೆ ಹಿರಿಯ ಸರ್ಕಾರಿ ಅಭಿಯೋಜಕ ಹುದ್ದೆಗೆ ಬಡ್ತಿ ನೀಡಲಾಗಿದೆ.