ಶಿಕ್ಷಕ ಹುದ್ದೆಗೆ ನಕಲಿ ಜಾತಿ ಪ್ರಮಾಣಪತ್ರ: ಆರೋಪಿ ಶಿಕ್ಷಕಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ಶಿಕ್ಷಕ ಹುದ್ದೆಗೆ ನಕಲಿ ಜಾತಿ ಪ್ರಮಾಣಪತ್ರ: ಆರೋಪಿ ಶಿಕ್ಷಕಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವ ಮೊಗೇರ ಜಾತಿಗೆ ಸೇರಿದ್ದರೂ ಪಶಿಷ್ಟ ಜಾರಿಯ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಮೀಸಲಾತಿಯಡಿ ಸಹಾಯಕ ಕನ್ನಡ ಶಿಕ್ಷಕರ ಹುದ್ದೆ ಪಡೆಯಲು ಮುಂದಾಗಿದ್ದ ಆರೋಪಿ ಶಿಕ್ಷಕಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನಿರಾಕರಿಸಿದೆ.
ಉತ್ತರ ಕನ್ನಡದ ಭಟ್ಕಳ ತಾಲೂಕಿನ ಬೆಂಗೆರೆ ನಿವಾಸಿ ಸರಸ್ವತಿ ಪ್ರಕರಣದ ಆರೋಪಿ. ಅವರು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ನ್ಯಾ. ಜೆ.ಎಂ. ಖಾಜಿ ಅವರಿದ್ದ ಏಕಸದಸ್ಯ ಪೀಠ ತಿರಸ್ಕರಿಸಿದೆ.
ಅರ್ಜಿದಾರರು ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವ ಮೊಗೇರಾ ಜಾತಿಗೆ ಸೇರಿದ್ದು, ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಸಲ್ಲಿಸುವ ಮೂಲಕ ತಪ್ಪೆಸಗಿದ್ದು ಮೇಲ್ನೋಟಕ್ಕೆ ಸಾಬೀತಾಗಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಲಾಗದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ದಾಖಲೆಗಳನ್ನು ಪರಿಶೀಲಿಸಿ, ಅರ್ಜಿದಾರರ ವಾದ ಮತ್ತು ಎದುದಾರರ ಪ್ರತಿವಾದ ಆಲಿಸಿದ ನ್ಯಾಯಪೀಠ, ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಶಿಕ್ಷಕರ ಹುದ್ದೆ ಪಡೆದುಕೊಳ್ಳದಿದ್ದರೂ, ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವುದೇ ಅಪರಾಧ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಲಾಗದು ಎಂದು ಹೈಕೋರ್ಟ್ ಪೀಠ ಹೇಳಿದೆ.
ಅರ್ಜಿದಾರರಾದ ಆರೋಪಿ ಸರಸ್ವತಿ ತಮ್ಮ ವಿರುದ್ಧ ಜಾತಿ ಪರಿಶೀಲನಾ ಸಮಿತಿಯ ನಿರ್ದೇಶನದಂತೆ ನಾಗರಿಕ ಹಕ್ಕು ನಿರ್ದೇಶನಾಲಯ ಸಲ್ಲಿಕೆ ಮಾಡಿರುವ ದೂರನ್ನು ರದ್ದುಪಡಿಸಬೇಕು ಎಂದು ಕೋರಿ ಮೇಲ್ನನವಿ ಸಲ್ಲಿಸಿದ್ದರು.
ಪ್ರಕರಣ ಏನು..?
ಅರ್ಜಿದಾರರು ಮೊಗೇರಾ ಜಾತಿಗೆ ಸೇರದ್ದರೂ ಪರಿಶಿಷ್ಟ ಜಾತಿಗೆ ಸೇರಿರುವ ಪ್ರಮಾಣ ಪತ್ರ ಸಲ್ಲಿಸಿದ್ದರು. ಆದರೆ, ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ನಡೆಸಿದ ಪರಿಶೀಲನೆ ಸಂದರ್ಭದಲ್ಲಿ ಮೇಲ್ಮನವಿದಾರರು ಮೊಗೇರಾ ಜಾತಿಗೆ ಸೇರಿದ್ದಾರೆ ಎಂದು ಕಂಡುಬಂತು. ಪರಿಶಿಷ್ಟ ಜಾತಿ ಹೆಸರಿನಲ್ಲಿ ತಹಶೀಲ್ದಾರ್ ಕಚೇರಿಗೆ ಸುಳ್ಳು ಮಾಹಿತಿ ನೀಡಿ ಈ ಬಗ್ಗೆ ಪ್ರಮಾಣ ಪತ್ರ ಪಡೆದಿದ್ದಾರೆ ಎಂಬ ಅಂಶ ಗೊತ್ತಾಯಿತು.
ಈ ಹಿನ್ನೆಲೆಯಲ್ಲಿ ತಹಸೀಲ್ದಾರ್ ವಿವಾದಿತ ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸಿದರು. ಇದರ ಬೆನ್ನಲ್ಲೇ, ಜಿಲ್ಲಾ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಅಧಿಕಾರಿಗಳು SC-ST ದೌರ್ಜನ್ಯ ಕಾಯ್ದೆಯಡಿ ದೂರು ಸಲ್ಲಿಸಿದ್ದರು.
ಪೊಲೀಸರು ಅರೋಪಪಟ್ಟಿ ಸಲ್ಲಿಸಿದ್ದು, ಬಂಧನ ಆಗುವ ಮೊದಲೇ ಆರೋಪಿ ಸರಸ್ವತಿ ಕಾರವಾರದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮಾನ್ಯ ನ್ಯಾಯಾಲಯ ತಿರಸ್ಕರಿಸಿತ್ತು.