13352 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಂದುವರಿಸಿ: ಹೈಕೋರ್ಟ್ ಗ್ರೀನ್ ಸಿಗ್ನಲ್
13352 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಂದುವರಿಸಿ: ಹೈಕೋರ್ಟ್ ಗ್ರೀನ್ ಸಿಗ್ನಲ್
13352 ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ನಡೆಸುವ ಪ್ರಕ್ರಿಯೆ ಮುಂದುವರಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಹಸಿರು ನಿಶಾನೆ ನೀಡಿದೆ.
ಈ ಹಿಂದೆ ಆಯ್ಕೆ ಪಟ್ಟಿ ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ನೇತೃತ್ವದ ನ್ಯಾಯಪೀಠ ರದ್ದುಪಡಿಸಿತು.
ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 451 ಅಭ್ಯರ್ಥಿಗಳನ್ನು ಹೊರಗಿಡಲಾಗಿದೆ. ಈ ಅಭ್ಯರ್ಥಿಗಳು ತಮ್ಮ ತಕರಾರನ್ನು ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (KSAT) ಮುಂದೆ ಮಂಡಿಸಿ ಸೂಕ್ತ ನ್ಯಾಯ ಪಡೆಯಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ರಾಜ್ಯದಾದ್ಯಂತ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳು ದೊಡ್ಡ ಪ್ರಮಾಣದಲ್ಲಿ ಖಾಲಿ ಉಳಿದಿವೆ. ಇದರಿಂದ 6ರಿಂದ 8ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಹೀಗಾಗಿ ಸರ್ಕಾರ 2023ರ ಜೂನ್ 8ರಂದು ಸಿದ್ದಪಡಿಸಿರುವ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಾರ 13352 ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಹುದ್ದೆಗಳಿಗೆ ಆಯ್ಕೆಯಾದ ಶಿಕ್ಷಕರ ನೇಮಕಾತಿ ಮುಂದುವರಿಸಬಹುದು ಎಂದು ನ್ಯಾಯಪೀಠ ತಿಳಿಸಿದೆ.
ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ವಾದ ಮಂಡಿಸಿದ್ದರು.