ಖುಲಾಸೆ ವಿರುದ್ಧ ಮೇಲ್ಮನವಿ: ದಲಿತರ ಮೇಲೆ ಹಲ್ಲೆ ನಡೆಸಿದ 10 ಮಂದಿಗೆ 1 ವರ್ಷ ಜೈಲು
ಖುಲಾಸೆ ವಿರುದ್ಧ ಮೇಲ್ಮನವಿ: ದಲಿತರ ಮೇಲೆ ಹಲ್ಲೆ ನಡೆಸಿದ 10 ಮಂದಿಗೆ 1 ವರ್ಷ ಜೈಲು
ದಲಿತರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದಲ್ಲಿ ಆರೋಪಿಗಳನ್ನು ಬಿಡುಗಡೆ ಮಾಡಿದ್ದು, ಇದನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, 10 ಆರೋಪಿಗಳಿಗೆ ಒಂದು ವರ್ಷ ಜೈಲು ಹಾಗೂ ಮೂರು ಸಾವಿರ ರೂ. ದಂಡ ವಿಧಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.
ಆರೋಪಿಗಳು ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದುಂದ ಗ್ರಾಮದ ನಿವಾಸಿಗಳಾಗಿದ್ದಾರೆ.
ಸಿವಿಲ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುದೀಪ್ ಎಂಬವರ ವಿರುದ್ಧ ಈ ಪ್ರಕರಣದ ಸಂತ್ರಸ್ತೆ ಲಕ್ಷ್ಮಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರಿಂದ ಸಿಟ್ಟಿಗೆದ್ದ ಆರೋಪಿತರು 2008ರ ಆಗಸ್ಟ್ 14ರಂದು ಹರಿಜನ ಕಾಲನಿಗೆ ನುಗ್ಗಿ ಜಾತಿ ನಿಂದನೆ ಮಾಡಿ ದೊಣ್ಣೆ ಇತ್ಯಾದಿಗಳಿಂದ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.
2011ರಲ್ಲಿ ಸದ್ರಿ ಈ ಪ್ರಕರಣದ ವಿಚಾರಣೆ ಮುಗಿಸಿದ ವಿಚಾರಣಾ ನ್ಯಾಯಾಲಯ ಆರೋಪಿಗಳನ್ನು ಆರೋಪಮುಕ್ತಗೊಳಿಸಿ ಬಿಡುಗಡೆ ಮಾಡಿತ್ತು.
ವಿಚಾರಣಾ ನ್ಯಾಯಾಲಯದ ಈ ತೀರ್ಪು ಪ್ರಶ್ನಿಸಿ ಲಕ್ಷ್ಮಮ್ಮ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು.