ನ್ಯಾಯಾಂಗ ತೀರ್ಪು ರದ್ದುಪಡಿಸುವ ಅಧಿಕಾರ ಶಾಸಕಾಂಗಕ್ಕೆ ಇಲ್ಲ- ಸುಪ್ರೀಂ ಕೋರ್ಟ್ ಸಿಜೆಐ ಚಂದ್ರಚೂಡ್
ನ್ಯಾಯಾಂಗ ತೀರ್ಪು ರದ್ದುಪಡಿಸುವ ಅಧಿಕಾರ ಶಾಸಕಾಂಗಕ್ಕೆ ಇಲ್ಲ- ಸುಪ್ರೀಂ ಕೋರ್ಟ್ ಸಿಜೆಐ ಚಂದ್ರಚೂಡ್
ತೀರ್ಪು ತಪ್ಪಾಗಿದೆ ಎಂದು ಸಮರ್ಥಿಸಿಕೊಂಡು ಅದನ್ನು ನೇರವಾಗಿ ರದ್ದುಪಡಿಸುವ ಅಧಿಕಾರ ಶಾಸಕಾಂಗಕ್ಕೆ ಇಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಡಾ. ಡಿ.ವೈ. ಚಂದ್ರಚೂಡ್ ಹೇಳಿದ್ದಾರೆ.
ನ್ಯಾಯಾಲಯಗಳು ತೀರ್ಪು ಪ್ರಕಟಿಸಿದ ಬಳಿಕ ಶಾಸಕಾಂಗ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದರ ಬಗ್ಗೆ ಸ್ಪಷ್ಟವಾದ ಗೆರೆಯಿದೆ. ನ್ಯಾಯಾಲಯವು ಯಾವುದೇ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಗುರುತಿಸುವ ನ್ಯೂನ್ಯತೆಯನ್ನು ಸರಿಪಡಿಸಲಷ್ಟೇ ಕಾನೂನು ರೂಪಿಸುವ ಅಧಿಕಾರ ಶಾಸಕಾಂಗ ಇದೆ ಎಂದು ಅವರು ಹೇಳಿದರು.
ನ್ಯಾಯಾಂಗ ನೀಡಿದ ತೀರ್ಪಿಗೆ ಸಮಾಜ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬ ಬಗ್ಗೆ ನ್ಯಾಯಮೂರ್ತಿಗಳು ಚಿಂತಿಸುವುದಿಲ್ಲ. ಅವರು ಸಂವಿಧಾನಕ್ಕೆ ಉತ್ತರದಾಯಿತ್ವ ಹೊಂದಿದ್ದಾರೆ. ಇದು ಚುನಾಯಿತ ಸರ್ಕಾರ ಮತ್ತು ನ್ಯಾಯಾಂಗದ ನಡುವಿರುವ ವ್ಯತ್ಯಾಸವಾಗಿದೆ ಎಂದು ಅವರು ಸ್ಪಷ್ಟ ಶಬ್ಧಗಳಲ್ಲಿ ಹೇಳಿದರು.
ತೀರ್ಪು ನೀಡುವ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಸಂವಿಧಾನ ಪ್ರಕಾರ ಅಥವಾ ಅದರ ನೀತಿ ನಿಯಮಗಳನ್ನಷ್ಟೇ ಅನುಸರಿಸುತ್ತಾರೆ. ಸಾರ್ವಜನಿಕ ನೀತಿ-ನಿಯಮಗಳನ್ನು ಪರಿಗಣಿಸುವುದಿಲ್ಲ ಎಂದು ನ್ಯಾ. ಚಂದ್ರಚೂಡ್ ಹೇಳಿದರು.