ಸುಪ್ರೀಂ ಕೋರ್ಟ್ ಮೂವರು ನ್ಯಾಯಮೂರ್ತಿಗಳ ಪ್ರಮಾಣ
Thursday, November 9, 2023
ಸುಪ್ರೀಂ ಕೋರ್ಟ್ ಮೂವರು ನ್ಯಾಯಮೂರ್ತಿಗಳ ಪ್ರಮಾಣ
ಸುಪ್ರೀಂ ಕೋರ್ಟ್‌ಗೆ ಮೂವರು ನ್ಯಾಯಮೂರ್ತಿಗಳ ನೇಮಕವಾಗಿದ್ದು, ಅವರು ನವೆಂಬರ್ 9ರಂದು ಪ್ರಮಾಣವಚನ ಸ್ವೀಕರಿಸಿದರು. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಿಧಿ ಬೋಧಿಸಿದರು.
ನ್ಯಾ. ಸತೀಶ್ ಚಂದ್ರ ಶರ್ಮಾ, ಆಗಸ್ಟಿನ್ ಜಾರ್ಜ್ ಮಾಸಿ ಮತ್ತು ನ್ಯಾ. ಸಂದೀಪ್ ಮೆಹ್ತಾ ಅವರು ಈ ಮೂಲಕ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಈ ಮೂಲಕ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಒಟ್ಟು ಸಂಖ್ಯೆ 34ಕ್ಕೇರಿದೆ.