ವಕೀಲರ ಮೇಲಿನ ಹಲ್ಲೆ ಪ್ರಕರಣ ಸಿಐಡಿ ತನಿಖೆಗೆ: ರಾಜ್ಯ ಸರ್ಕಾರ ಮಹತ್ವದ ಆದೇಶ
Sunday, December 3, 2023
ವಕೀಲರ ಮೇಲಿನ ಹಲ್ಲೆ ಪ್ರಕರಣ ಸಿಐಡಿ ತನಿಖೆಗೆ: ರಾಜ್ಯ ಸರ್ಕಾರ ಮಹತ್ವದ ಆದೇಶ
ಚಿಕ್ಕಮಗಳೂರಿನ ವಕೀಲ ಪ್ರೀತಂ ಮೇಲಿನ ಪೊಲೀಸರ ಹಲ್ಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಪಶ್ಚಿಮ ವಲಯದ ಐಜಿಪಿ ಚಂದ್ರಗುಪ್ತ ಅವರು ಈ ಮಾಹಿತಿಯನ್ನು ಮಾಧ್ಯಮಕ್ಕೆ ನೀಡಿದ್ದು, ವಕೀಲರ ಮೇಲಿನ ಹಲ್ಲೆಯನ್ನು ನಿಷ್ಪಕ್ಷಪಾತವಾಗಿ ನಡೆಸಲು ಸಿಐಡಿಗೆ ಪ್ರಕರಣದ ತನಿಖೆಯನ್ನು ನೀಡಲಾಗಿದೆ. ಸದ್ರಿ ಪ್ರಕರಣದ ಪ್ರತಿ ಹಂತದ ತನಿಖೆಯನ್ನೂ ಸಿಐಡಿ ನಡೆಸಲಿದೆ.
ಹೆಲ್ಮೆಟ್ ಹಾಕದ ಹಿನ್ನೆಲೆಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದ ಬಳಿಕ ವಕೀಲರಾದ ಪ್ರೀತಂ ಅವರ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.