NI Act: Onus of Accused- ಚೆಕ್ ಅಮಾನ್ಯ ಪ್ರಕರಣ: ಆರೋಪಿ ಹೊಣೆಗಾರಿಕೆ ಬಗ್ಗೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
ಚೆಕ್ ಅಮಾನ್ಯ ಪ್ರಕರಣ: ಆರೋಪಿ ಹೊಣೆಗಾರಿಕೆ ಬಗ್ಗೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಯು ನೀಡಿದ ಚೆಕ್ ಫಿರ್ಯಾದಿದಾರ ನೀಡಿದ ಸಾಲದ ಮರುಪಾವತಿಗೆ ಅಲ್ಲ ಎಂಬುದನ್ನು ಸಾಬೀತುಪಡಿಸುವ ಹೊಣೆಗಾರಿಕೆ ಆರೋಪಿಯದ್ದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಆರೋಪಿ ಅರ್ಜಿದಾರ ಮುದ್ದುಮಾದಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ವೆಂಕಟೇಶ್ ನಾಯಕ್ ಟಿ. ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ಹೊರಡಿಸಿದ್ದು, ಆರೋಪಿಯ ಶಿಕ್ಷೆಯನ್ನು ಎತ್ತಿಹಿಡಿದಿದೆ.
ಚೆಕ್ ನೀಡಿರುವುದನ್ನು ಒಪ್ಪಿಕೊಂಡಿರುವಾಗ, ಚೆಕ್‌ನ ಮೌಲ್ಯವನ್ನು ಒಪ್ಪಿಕೊಂಡಿರುವಾಗ, ಚೆಕ್‌ನಲ್ಲಿ ಹಾಕಲಾದ ಸಹಿ ಬಗ್ಗೆಯೂ ಆಕ್ಷೇಪಣೆ ಇಲ್ಲದಾಗ ನೆಗೋಷಿಯೇಬಲ್ ಇನ್ಸ್‌ಟ್ರುಮೆಂಟ್ಸ್ ಆಕ್ಟ್ ಅಡಿಯಲ್ಲಿ ದಾಖಲಾದ ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಯನ್ನು ಶಿಕ್ಷೆಗೆ ಗುರಿಪಡಿಸಬಹುದು ಎಂದು ನ್ಯಾಯಪೀಠ ಹೇಳಿದೆ.
ಪ್ರಕರಣ: ಮುದ್ದುಮಾದಯ್ಯ Vs ಬಿ. ಜ್ಯೋತಿ
ಕರ್ನಾಟಕ ಹೈಕೋರ್ಟ್, CrRP 366/2019